36.7 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು.

ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು , ಮಾತುಕತೆ ನಡೆಸಿ , ಮಕ್ಕಳಿಗೆ ಕಾನೂನಿನ ಪಾಠ ಮಾಡಿದರು. ಸರ್ಕಾರದ ಸೌಲಭ್ಯಗಳನ್ನು ಚೆನ್ನಾಗಿ ಬಳಸಿಕೊಂಡು , ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಆಗ ಸರ್ಕಾರದ ಕಾರ್ಯಕ್ರಮಗಳು ಸಾರ್ಥಕತೆಯಾಗುತ್ತದೆ ಎಂದರು.

ಮಧ್ಯಾಹ್ನ ಮಕ್ಕಳ ಜೊತೆಗೆ ಊಟ ಮಾಡಿದ ಡಿವೈಎಸ್ಪಿ ರವರು ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ ಮಾಡಿದರು. ಜೊತೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಸತಿಶಾಲಾ ಕಟ್ಟಡವನ್ನು ವೀಕ್ಷಿಸಿ ಸಂತಸಗೊಂಡರು. ನೂತನ ಕಟ್ಟಡದ ಉದ್ಘಾಟನೆಯನ್ನು ಆದಷ್ಟು ಬೇಗ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ , ಧರ್ಮಸ್ಥಳ ಪೋಲಿಸ್ ಠಾಣೆಯ ಸಿಬ್ಬಂದಿಗಳು ಜೊತೆಗಿದ್ದರು. ಶಾಲಾ ಶಿಕ್ಷಕರು , ಹಾಸ್ಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya
error: Content is protected !!