25.4 C
ಪುತ್ತೂರು, ಬೆಳ್ತಂಗಡಿ
September 11, 2026
ಧಾರ್ಮಿಕವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ ಧರ್ಮಯಾನ ಶೋಭಾಯಾತ್ರೆಯು ಅತ್ಯಂತ ವಿಜೃಂಭಣೆಯಿಂದ ಸಾವಿರಾರು ಭಕ್ತರ ಕೂಡುವಿಕೆಯಿಂದ ನಡೆಯಿತು.

ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರದ ಪ್ರಧಾನ ಸಂಚಾಲಕರಾಗಿ ಸೇವೆ ಸಲ್ಲಿಸಿ, ಧರ್ಮಯಾನ ಹಾಗೂ ಸುಪ್ರಸಾದ ಭೋಜನಾಯದ ವೈಬೋಗ ಹೆಚ್ಚಿಸಿದ ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ ಧಾರ್ಮಿಕ ಸಭೆಯಲ್ಲಿ ಉಜಿರೆ ಶ್ರೀ ಜನಾರ್ಧನ ಕ್ಷೇತ್ರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, “ಶ್ರೀ ಜನಾರ್ಧನ ವಿಭೂಷಣ ಗೌರವ” ನೀಡಿ ಗೌರವಿಸಿದರು.

ಕೆ.ಮೋಹನ್ ಕುಮಾರ್ ಅವರ ಮಾತೃಶ್ರೀ ಲೀಲಾವತಿ ಈ ಗೌರವ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಪಾದಂಗಳವರು,ಉಜಿರೆ ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು,ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್,ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್,ವಿಜಯ ಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿ ನವಶಕ್ತಿ ಹಾಗೂ ವಿವಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Related posts

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ ಮತ್ತು ಕುಟುಂಬಸ್ಥರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya
error: Content is protected !!