26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ ಮಧ್ಯಾಹ್ನ ಶಿಕ್ಷಕ ಹಾಗೂ ಶಿಕ್ಷಕೇತರ ಮಹಿಳಾ ಸಿಬ್ಬಂದಿಗಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದ್ದು, ಅದರ ಸಮಾರೋಪವಾಗಿ ಈ ಖೇಲ್ ಕೂದ್ ಮಹೋತ್ಸವವನ್ನು ಆಚರಿಸಲಾಯಿತು.

ನೋವೊ ಟ್ರೀ ಮೈಂಡ್ಸ್ ಸಂಸ್ಥೆಯ ಸಹನಾ ನಾಗರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಮಹಿಳೆಯರು ಪರಸ್ಪರ  ಒಬ್ಬರನ್ನೊಬ್ಬರು ಬೆಂಬಲಿಸಿ ಕರ‍್ಯನಿರ್ವಹಿಸಿದರೆ  ನಿಜವಾದ ಸಬಲೀಕರಣ ಸಾಧ್ಯ ಎಂದು  ಅಭಿಪ್ರಾಯಪಟ್ಟರು. ಕಾರ್ಯಕ್ರಮವನ್ನು ಕಬಡ್ಡಿ ವಿಶ್ವಕಪ್‌ನ ಚಿನ್ನದ ಪದಕ ವಿಜೇತೆ ಹಾಗೂ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ ಧನಲಕ್ಷ್ಮಿ ಉದ್ಘಾಟಿಸಿದರು. ಸಕ್ಷಮಾ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಸಕ್ಷಮಾ ಸಂಚಾಲಕಿ ಡಾ. ಗ್ರೀಷ್ಮಾ ಆಳ್ವ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ತಂಡದ ಪರಿಶ್ರಮವನ್ನು ಪ್ರಶಂಸಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರಿಗಾಗಿ ಇನ್ನಷ್ಟು ಅರ್ಥಪೂರ್ಣ ಹಾಗೂ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ ಎಂದರು.

ಸಕ್ಷಮಾ ಅಧ್ಯಕ್ಷೆ ಡಾ. ಅರ್ಚನಾ ಪ್ರಭಾತ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ದೀಪಾ ಕೊಠಾರಿ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕಾರ್ಯಕ್ರಮವನ್ನು ನಿಯತಿ ನಿರೂಪಿಸಿ, ಸಕ್ಷಮಾ ಕ್ರೀಡಾ ಕಾರ್ಯದರ್ಶಿ ದಿವ್ಯಾ ಭಂಡಾರಿ  ವಂದಿಸಿದರು.

ಮಹಿಳಾ ದಿನಾಚರಣೆ ಅಂಗವಾಗಿ ಒಂದು ತಿಂಗಳ ಕಾಲ ವಿವಿಧ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಮನರಂಜನಾ ಸ್ಪರ್ಧೆಗಳನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಜೀವಿತಾ ಶಂಕರ್ ಮುಖ್ಯ ಅತಿಥಿಯಾಗಿ ಆಗಮಿಸಿ, ಮಹಿಳಾ ಸಿಬ್ಬಂದಿಯ ಉತ್ಸಾಹ ಹಾಗೂ ತಂಡ ಮನೋಭಾವವನ್ನು ಮೆಚ್ಚಿ, ಆರೋಗ್ಯ ಮತ್ತು ಏಕತೆಯನ್ನು ಉತ್ತೇಜಿಸುವ ಇಂತಹ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ನಡೆಯಬೇಕು ಎಂದರು. 

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!