26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

ಮಾಲಾಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬೆಳ್ತಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಮಾಲಾಡಿ, ಅಮೃತ ಸಂಜೀವಿನಿ ಒಕ್ಕೂಟ ಮಾಲಾಡಿ ಇವುಗಳ ಜಂಟಿ ಸಹಯೋಗದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ರವರ ನೇತೃತ್ವದಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ ಮಾ.11ರಂದು ಗ್ರಾಮ ಪಂಚಾಯತ್ ಮಾಲಾಡಿಯಲ್ಲಿ ಆಯೋಜಿಸಲಾಯಿತು.

ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಸ್ವಾವಲಂಬಿಯಾಗಿ ಬದುಕುವ ಜೀವನೋಪಾಯ ಚಟುವಟಿಕೆ ಬಗ್ಗೆ ಮಾತನಾಡಿದರು. ಪ್ರಿಯ ಆಗ್ನೇಸ್ ಶಿಶು ಅಭಿವೃದ್ಧಿ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಮಹಿಳಾ ದಿನಾಚರಣೆಯ, ಮಾಸಿಕ ಹಳ್ಳಿ ಸಂತೆ ಮತ್ತು ಸಂಜೀವಿನಿ ಸದಸ್ಯರು ನಡೆಸುವ ಕೃಷಿ ಮತ್ತು ಕೃಷಿಯೇತರ ಜೀವನೋಪಾಯ ಚಟುವಟಿಕೆಯ ಸಾಲ ಸೌಲಭ್ಯ ಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಆರ್ಥಿಕ ಸಾಕ್ಷಾರತ ಸಮಾಲೋಚಕಿ ಉಷಾ ಕಾಮತ್ ಇನ್ಶೂರೆನ್ಸ್, ಪಿಂಚಣಿ, ಬ್ಯಾಂಕ್ ಸಾಲಗಳ ಬಗ್ಗೆ ಸಂಜೀವಿನಿ ಸದಸ್ಯರಿಗೆ ಮಾಹಿತಿ ನೀಡಿದರು.

ಹಿರಿಯ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಒಕ್ಕೂಟದ ಸಿಬ್ಬಂದಿಗಳನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಕಳಿಯ, ಬಳೆoಜ, ಕುವೆಟ್ಟು, ಮಚ್ಚಿನ, ಮಡಂತ್ಯಾರು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು ಮತ್ತು ಸ್ವಚ್ಛ ಸಂಕಿರ್ಣ ಘಟಕದ ಸಿಬ್ಬಂದಿಗಳು,ಸಂಜೀವಿನಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕ ಜಯಾನಂದ್ ಪ್ರಸ್ತಾವಿಸಿ, ಸಂಜೀವಿನಿ ಸಿಬ್ಬಂದಿಗಳು ನಾಡಗೀತೆ ಹಾಡಿದರು. ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಸುನಿತಾ ಐತಲ್ ವಂದಿಸಿದರು. ವಲಯ ಮೇಲ್ವಿಚಾರಕ ಜಯಾನಂದ್ ನಿರೂಪಿಸಿದರು.

Related posts

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!