September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

ಶಿಶಿಲ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಹಾಗೂ ಊರ ಪರಊರ ಸಹೃದಯಿ ಧರ್ಮಾಭಿಮಾನಿ ಸದ್ದರ್ಮ ಬಂಧುಗಳ, ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ವಿಮಾನಶುದ್ಧಿ, 24 ಕಲಶ ಅಭಿಷೇಕ, ಪಂಚಾಮೃತ ಅಭಿಷೇಕ, ಶ್ರೀ ಸಮ್ಮೇದಗಿರಿ ಸಿದ್ಧ ಕ್ಷೇತ್ರಾ ಆರಾಧನೆ, ಮಹಾಮಾತೆ ಪದ್ಮಾವತಿ ದೇವಿಗೆ ಶೋಡಶೋಪಚಾರ, ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮ, ಉತ್ಸವವು ನಡೆಯಿತು.

ಈ ಸಂಧರ್ಭದಲ್ಲಿ ಸಾಧನೆ ಗೈದ ಸಾಧಕರಿಗೆ, ಅತಿ ಹೆಚ್ಚಿನ ಅಂಕಗಳನ್ನು ಪಡೆದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಬಾಗವಹಿಸಿ ಬಂಧುಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya
error: Content is protected !!