28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಕೆ.ಸಿ ರೋಡ್ ಶಾಖೆಯಲ್ಲಿ ಜರುಗಿತು.

ಸಂಘದ ಸದಸ್ಯರುಗಳಾದ ಎಚ್ ಸೀತರಾಮ ರೈ, ರಾಮಕೃಷ್ಣ, ಸೈಯ್ಯದ್ ಅಹಮ್ಮದ್ ಬಾವ, ಚಂದ್ರಶೇಖರ್, ಎಚ್ ಅಶ್ವಿತಾ, ಹಾಗೂ ಜಯಂತಿ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮಾತನಾಡಿ, “ಸಂಘದ ಕೆ.ಸಿ ರೋಡ್ ಶಾಖೆಯಲ್ಲಿ ಗ್ರಾಹಕರ ಸಹಕಾರದಿಂದ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಹಾಗೂ ಆಭರಣ ಸಾಲವನ್ನು ನೀಡಲಾಗಿದೆ. ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 8.50, 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು.

ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಎಲ್ಲಾ ಗ್ರಾಹಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಮುಂದಿನ ಏಪ್ರಿಲ್ ತಿಂಗಳಲ್ಲಿ ಕೆ.ಸಿ ರೋಡ್ ಶಾಖೆಯಲ್ಲಿ ವ್ಯವಸ್ಥಿತವಾಗಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗುವುದು. ಎಲ್ಲಾ ಸಂಘದ ಗ್ರಾಹಕರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಎಚ್ ಸೀತರಾಮ ರೈ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿಗಳು ಗ್ರಾಹಕ ಸ್ನೇಹಿ ನಗುಮುಖದ ಸೇವೆಯನ್ನು ನೀಡುತ್ತಿದ್ದಾರೆ ಎಂದು ಸಂಘದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸದಸ್ಯರಾದ ಎಚ್ ಅಶ್ವಿತಾ ಮಾತನಾಡಿ “ಸಿಬ್ಬಂದಿಗಳು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಘದಲ್ಲಿ ಲಭ್ಯವಿರುವ ಎಲ್ಲಾ ಸೇವೆಗಳ ಬಗ್ಗೆ ಉತ್ತಮ ರೀತಿಯಲ್ಲಿ ಮಾಹಿತಿ ನೀಡುತ್ತಾ ಇದ್ದಾರೆ” ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ , “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಮುಂದಿನ ದಿನಗಳಲ್ಲಿ ಜಪುö್ಪ ಮಾರ್ಕೆಟ್ ಮತ್ತು ಮೂಡಬಿದ್ರೆಯಲ್ಲಿ ಹೊಸ ಶಾಖೆ ತೆರೆಯುವ ಯೋಜನೆಯನ್ನು ತಿಳಿಸಿ, ಇನ್ನೂ ಮುಂದೆಯು ಇದೇ ರೀತಿ ನಿಮ್ಮ ಸಹಕಾರವಿರಲಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಆನಂದ್ ಎಸ್. ಕೊಂಡಾಣ ಮತ್ತು ಗೋಪಾಲ್ ಎಮ್ ರವರು ಉಪಸ್ಥಿತಿರಿದ್ದರು.

ಶಾಖೆಯ ಸಿಬ್ಬಂದಿ ರತಿಕಾ ರವರು ಸ್ವಾಗತಿಸಿ, ಸಿಬ್ಬಂದಿ ವಿಶಾಲ್ ಕುಮಾರ್ ಸುವರ್ಣ ವಂದಿಸಿದರು. ಶಾಖೆಯ ಶಾಖಾಧಿಕಾರಿ ಶಿವರಾಮ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!