24.5 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಸಹಯೋಗದಲ್ಲಿ ಕಾಲೇಜಿನ ಶೈಕ್ಷಣಿಕ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದ ವತಿಯಿಂದ “ಬರೋಡಾ ಅಚೀವರ್ಸ್ ಅವಾರ್ಡ್-೨೦೨೬” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕಾಲೇಜಿನ ಸಮ್ಯಕ್ ದರ್ಶನ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅಭ್ಯಾಗತ ಬ್ಯಾಂಕ್ ಆಫ್ ಬರೋಡಾ ಪುತ್ತೂರು ಶಾಖೆಯ ಉಪ ಪ್ರಾದೇಶಿಕ ವ್ಯವಸ್ಥಾಪಕ ಅಮಿತ್ ಸಿ. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿಭೆ ಮತ್ತು ಕೌಶಲ್ಯದ ಜೊತೆಗೆ ಬದುಕಿನ ಶಿಸ್ತು ಅತೀ ಮುಖ್ಯ. ಇದು ನಮ್ಮ ವ್ಯಕ್ತಿತ್ವವನ್ನು ರೂಪಿಸುವ ಜೊತೆಗೆ ಉನ್ನತ ಮಟ್ಟದ ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಕೌಶಲ್ಯವನ್ನು ಕಾರ್ಯರೂಪಕ್ಕೆ ತಂದಾಗ ತಮ್ಮ ವ್ಯಕ್ತಿತ್ವದ ನಿರ್ಮಾಣ ಸಾಧ್ಯವಾಗುತ್ತದೆ. ಸಂಸ್ಥೆಯೂ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಎಲ್ಲಾ ರೀತಿಯ ವ್ಯವಸ್ಥೆಗಳು ಹಾಗೂ ಮಾರ್ಗದರ್ಶನವನ್ನು ನೀಡುತ್ತಾ ಬಂದಿದೆ. ಇದನ್ನು ನಿರಂತರವಾಗಿ ಬಳಸಿಕೊಂಡು ಬದುಕು ಕಟ್ಟಿಕೊಳ್ಳಬೇಕು.

ಕಾಲೇಜಿನಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಒಟ್ಟು 8 ವಿದ್ಯಾರ್ಥಿಗಳಿಗೆ ಸುಮಾರು ರೂ.1.40 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ವೇದಿಕೆಯಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಉಪ ಪ್ರಾಂಶುಪಾಲರಾದ ನಂದ ಕುಮಾರಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಕಮಿಟಿಯ ಸಂಯೋಜಕ ಶ್ರೇಯಸ್ ಬಿ, ಉಜಿರೆ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮ್ಯಾನೇಜರ್ ವಿನಾಯಕ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯಕ್, ಐಕ್ಯುಎಸ್ ಸಂಯೋಜಕ ಪ್ರೋ. ಗಜಾನನ ಆರ್ ಭಟ್ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಭಾಗಿಯಾಗಿದ್ದರು.

ವಿದ್ಯಾರ್ಥಿನಿ ಅನ್ವಿತಾ ಸೆರಾವೋ ನಿರೂಪಿಸಿ, ಉಪನ್ಯಾಸಕ ಶರಶ್ಚಂದ್ರ ವಂದಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಕಮಿಟಿಯ ಸಂಯೋಜಕ ಶ್ರೇಯಸ್ ಬಿ ಕಾರ್ಯಕ್ರಮ ಸಂಯೋಜಿಸಿದರು. ಉಪನ್ಯಾಸಕಿ ಮಂಜುಳಾ ಸಹಕರಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ನಗರ ಪ್ರದೇಶಗಳಲ್ಲಿ ದೊರಕುವ ಎಲ್ಲಾ ರೀತಿಯ ಅನುಕೂಲಗಳು ಮತ್ತು ವ್ಯವಸ್ಥೆಗಳು ಲಭ್ಯವಿದೆ. ಎಲ್ಲಾ ರೀತಿ ಪರೀಕ್ಷೆಗಳ ನುರಿತ ತರಬೇತಿಯು ಈ ಸಂಸ್ಥೆಯಲ್ಲಿ ನೀಡಲಾಗುತ್ತಿದೆ. ಪಠ್ಯ ಚಟುವಟಿಕೆಗಳು ಮಾತ್ರವಲ್ಲದೆ ಕ್ರೀಡಾ ವಿಭಾಗ ಮತ್ತು ಸಾಂಸ್ಕೃತಿಕ ವಿಭಾಗದಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತಾವು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಈ ಕಾರಣದಿಂದಾಗಿಯೇ ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ.‘ ಡಾ. ಸತೀಶ್ಚಂದ್ರ ಎಸ್
ಕಾರ್ಯದರ್ಶಿಗಳು, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು

1.40 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ
ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಕ್ರೀಡಾ ಕ್ಷೇತ್ರದಿಂದ ತೃತೀಯ ವರ್ಷದ ಬಿಎ ವಿದ್ಯಾರ್ಥಿನಿ ಸ್ವಪ್ನ ವೈ.ಜೆ, ಸರ್ವಾಂಗೀಣ ಸಾಧಕಿ ಯಾಗಿ ಪ್ರಥಮ ವರ್ಷದ ಎಂಎಸ್ ಸಿ ಸೈಕಾಲಜಿ ವಿದ್ಯಾರ್ಥಿನಿ ಜಿತು ಕೆ ಜೋಜಿ ಹಾಗೂ ಶೈಕ್ಷಣಿಕ ಸಾಧನೆಗಾಗಿ ಪ್ರಥಮ ವರ್ಷದ ಬಿವೋಕ್ ವಿದ್ಯಾರ್ಥಿನಿ ಅಂಕಿತಾ ಎನ್ ತಲಾ ೩೦,೦೦೦ ದಂತೆ ಹಾಗೂ ಇತರೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಾಧನೆ ತೋರಿದ ತೃತೀಯ ಬಿಎಸ್‌ಸಿ ವಿದ್ಯಾರ್ಥಿನಿ ದೀಕ್ಷಿತಾ ಎಚ್.ಎಸ್, ತೃತೀಯ ಬಿಬಿಎ ವಿದ್ಯಾರ್ಥಿ ಪ್ರೀತೇಶ್, ತೃತೀಯ ಬಿಎ ವಿದ್ಯಾರ್ಥಿ ಅಚಲ್ ಆರ್, ತೃತೀಯ ಬಿಕಾಂ ವಿದ್ಯಾರ್ಥಿನಿ ಧರಿತ್ರಿ ಭಿಡೆ, ದ್ವಿತೀಯ ಬಿಸಿಎ ವಿದ್ಯಾರ್ಥಿ ವಿಶ್ವಾಸ್ ಎಮ್ ಎಮ್ ತಲಾ ೧೦,೦೦೦ ದಂತೆ ವಿದ್ಯಾರ್ಥಿ ವೇತನ ಸ್ವೀಕರಿಸಿದರು.

Related posts

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!