33.1 C
ಪುತ್ತೂರು, ಬೆಳ್ತಂಗಡಿ
March 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗವು ‘ ಬ್ಲಾಕ್‌ಚೇನ್ ತಂತ್ರಜ್ಞಾನ ಮತ್ತು ಸೈಬರ್ ಭದ್ರತೆಗಳ ಇತ್ತೀಚಿನ ಬೆಳವಣಿಗೆಗಳು’ ವಿಷಯದ ಮೇಲೆ 5 ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ., ಅತಿಥಿಗಳಾದ ಧಾರವಾಡದ ಎಸ್.ಡಿ.ಎಂ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ CSE ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಜಶೇಖರಪ್ಪ ಮತ್ತು ಪ್ರೊ. ಆನಂದ ಪಶುಪತಿಮಠ ಸಮ್ಮುಖದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗದ ಮುಖ್ಯಸ್ಥ ಡಾ. ಜಿ.ಪಿ. ಹೆಗಡೆ ಉಪಸ್ಥಿತರಿದ್ದರು.

ಈ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಕಾಲೇಜಿನ 50 ಕ್ಕೂ ಅಧಿಕ ಜನ ಉಪನ್ಯಾಸಕರು ಸೇರಿದಂತೆ ವಿವಿಧ ಕಾಲೇಜಿನ ಸಹ ಪ್ರಾಧ್ಯಾಪಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಬ್ಲಾಕ್‌ಚೇನ್ ಹಾಗೂ ಸೈಬರ್ ಭದ್ರತೆಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಮುಖ ವಿಚಾರಗಳ ಅರಿವು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ತಂತ್ರಜ್ಞಾನದ ಅಗತ್ಯ ಕೌಶಲ್ಯಗಳನ್ನು ತಿಳಿಸಿಕೊಡಲಾಯಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!