September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಉಜಿರೆಯ ವಿಜಯಗೋಪುರ ಲೋಕಾರ್ಪಣೆ ಮತ್ತು ಬ್ರಹ್ಮರಥ ಹಾಗೂ ಪುಷ್ಪರಥ ಸಮರ್ಪಣೆ ಮತ್ತು ಅಷ್ಟಬಂಧ ಪುನಃ ಪ್ರತಿಷ್ಠಾ ಸಂದರ್ಭದಲ್ಲಿ ಶ್ರೀಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಬೆಳಾಲು ನಿರ್ಮಾಣದಲ್ಲಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಹಾಗೂ ಉಜಿರೆ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರ ಶುಭ ಆಶೀರ್ವಾದದಿಂದ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಅರ್ಪಿಸುವ ವಿ. ಹರೀಶ್ ನೆರಿಯ ಸಾಹಿತ್ಯದಲ್ಲಿ ಶಶಿಧರ್ ಬೆಳಾಲು ಗಾಯನದಲ್ಲಿ ಹಾಗೂ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳ ಇವರ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ “ಜಗದೋದ್ದಾರ ಶ್ರೀ ಜನಾರ್ದನ” ಆಲ್ಬಮ್ ಹಾಡಿನ ಪೋಸ್ಟರನ್ನು ಖ್ಯಾತ ಗಾಯಕ ಶಶಿಧರ್ ಕೋಟೆಯವರು ಉಜಿರೆ ಬ್ರಹ್ಮಕಲಶೋತ್ಸವದ ಭವ್ಯ ವೇದಿಕೆಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ವರ್ತಕ ರ ಸಂಘದ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಹಾಗೂ ಪದಾಧಿಕಾರಿಗಳು, ಸಾಹಿತ್ಯವನ್ನು ರಚಿಸಿದ ವಿ. ಹರೀಶ್ ನೆರಿಯ, ಗಾಯಕ ಶಶಿಧರ್ ಬೆಳಾಲು, ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳದ ಸಂಘಟಕಿ ಬೇಬಿ ಉಮೇಶ್ ಮತ್ತು ಭಕ್ತಿ ಹೆಜ್ಜೆ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!