ಬೆಳ್ತಂಗಡಿ: ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಭೀಕರ ರಸ್ತೆ ಅಪಘಾತ ನಡೆದಿದೆ.
ಕಾರಿನಲ್ಲಿದ್ದ ಮಾಜಿ ಎಪಿಎಂಸಿ ಸದಸ್ಯ ಚಂದ್ರಶೇಖರ ಶಿಶಿಲ, ಜನಾರ್ದನ ಗೌಡ ಕೇರಿಮಾರ್ ಉಜಿರೆ, ಕಕ್ಕಿಂಜೆ ಫೈನಾನ್ಸ್ ನ ಶ್ರೀಧರ ಗೌಡ ಮರಕಡ ಅರಳಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.












