33.1 C
ಪುತ್ತೂರು, ಬೆಳ್ತಂಗಡಿ
March 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕೀರ್ತಿಶೇಷ ಬ್ರಹ್ಮಶ್ರೀ ವೇದಮೂರ್ತಿ ಬಂಗಳಾಯಿ ಕೇಶವ ಜೋಗಿತ್ತಾಯರ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.13 ಹಾಗೂ 14ರಂದು ನಡೆಯಲಿದೆ.

ಮಾ.13ರಂದು ಪ್ರಾರ್ಥನೆ, ಗಣಪತಿ ಹೋಮ, ಕಲಶಪೂಜೆ, ಶ್ರೀ ದೇವರುಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಆಶ್ಲೇಷಾಬಲಿ, ತಂಬಿಲ, ದೈವಗಳಿಗೆ ತಂಬಿಲ ಸೇವೆ, ದುರ್ಗಾಪೂಜೆ, ರಂಗಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಮಾನಸ ಡ್ಯಾನ್ಸ್ ಕ್ರೀವ್ ಕಲ್ಲೇರಿ ಹಾಗೂ ಸ್ಥಳೀಯ ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಲಿದೆ.

ಮಾ.14ರಂದು ಗಣಪತಿ ಹೋಮ, ದೇವರ ಬಲಿ ಉತ್ಸವ, ದರ್ಶನಬಲಿ ಹಾಗೂ ಬಟ್ಟಲು ಕಾಣಿಕೆ, ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ ಸಂಜೆ ನೇಮೋತ್ಸವ ನಡೆಯಲಿರುವುದು. ಜಾತ್ರೋತ್ಸವದ ಸಂದರ್ಭದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯುವುದಾಗಿ ಪ್ರಕಟಣೆ ತಿಳಿಸಿದೆ.

Related posts

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ

Suddi Udaya
error: Content is protected !!