ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಾ.15ರಂದು ಬಂಗಾಡಿ ಕೊಲ್ಲಿ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ ಜರುಗಲಿರುವುದು.
ಉದ್ಘಾಟನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ನೆರವೇರಿಸಲಿದ್ದಾರೆ
ಸಭಾಧ್ಯಕ್ಷತೆಯನ್ನು ಕೊಲ್ಲಿ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.












