28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅರಿವು ಮೂಡಿಸಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಹೊಸನಾಲೆ ಕಾಫಿತೋಟಕ್ಕೆ ಕ್ಷೇತ್ರ ಭೇಟಿ ಕಾರ್ಯಕ್ರಮ ಆಯೋಜಿಸಲಾಯಿತು.

ಕ್ಷೇತ್ರ ಭೇಟಿ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಸತೀಶ್ ಬಿ. ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಮಹತ್ವ ಹಾಗೂ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಬಳಿಕ ಸಂಸ್ಥೆಯ ಅಧಿಕಾರಿಗಳಾದ ಗುರುದತ್ತ , ಶ್ರೀಪಾಲ್ ಎಲ್. ಜೈನ್ ಹಾಗೂ ಸುರೇಶ್ ಎನ್.ಎಸ್. ಜೈನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕೌಶಲ್ಯಾಭಿವೃದ್ಧಿ ಮತ್ತು ಕೈಗಾರಿಕಾ ತರಬೇತಿಯ ಮಹತ್ವವನ್ನು ವಿವರಿಸಿ ವಿವಿಧ ಮಾಹಿತಿಗಳನ್ನು ಹಂಚಿಕೊಂಡರು.

ಶೈಕ್ಷಣಿಕ ಭೇಟಿಯಲ್ಲಿ ಸುಮಾರು 50ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮವು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಗಣರಾಜ ಕೆ ಸಂಯೋಜಿಸಿದರು. ಈ ಸಂದರ್ಭದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಮತ್ತು ಅಭಿನಂದನ ಕೆ.ಸಿ. ಜೈನ್ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಎಲ್ಲಾ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಬಳಿಕ ವಿದ್ಯಾರ್ಥಿಗಳ ತಂಡ ಸಂಸೆಯ ಹೊಸನಾಲೆಯ ಕಾಫಿತೋಟಕ್ಕೆ ಭೇಟಿ ನೀಡಿದರು. ಈ ವೇಳೆ ಸುಕುಮಾರ್ ಜೈನ್ ಹೊಸನಾಲೆ ಕಾಫಿ ತೋಟದಲ್ಲಿನ ಕಾಫಿ ಬೆಳೆಗಾರಿಕೆ, ತೋಟದ ನಿರ್ವಹಣೆ ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿಗಳು ಕುದ್ರೆಮುಖ ರಾಷ್ಟ್ರೀಯ ಉದ್ಯಾನವನ ಮತ್ತು ಲಾಕ್ಯ ಅಣೆಕಟ್ಟು ಪ್ರದೇಶಗಳಿಗೆ ಭೇಟಿ ನೀಡಿ ಪರಿಸರ ಸಂರಕ್ಷಣೆ, ಪ್ರಕೃತಿ ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಸುಸ್ಥಿರ ಅಭಿವೃದ್ಧಿಯ ಮಹತ್ವವನ್ನು ತಿಳಿದುಕೊಂಡರು.

ಶೈಕ್ಷಣಿಕ ಪ್ರವಾಸ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅರಿವು ಮತ್ತು ಅನುಭವವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಭೇಟಿ ಗ್ರಾಮೀಣ ಅಭಿವೃದ್ಧಿ, ತಾಂತ್ರಿಕ ಶಿಕ್ಷಣ, ಕೃಷಿ ಪದ್ಧತಿ, ಆಧುನಿಕ ಕೃಷಿ ವಿಧಾನಗಳು ಮತ್ತು ತಂತ್ರಜ್ಞಾನದ ಕುರಿತಾಗಿ ಸೂಕ್ಷ್ಮ ಅವಲೋಕನದ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ತಾಂತ್ರಿಕ ಶಿಕ್ಷಣವು ಕೃಷಿ ಹಾಗೂ ಉದ್ಯೋಗಾವಕಾಶಗಳ ಅಭಿವೃದ್ಧಿಗೆ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಲು ಸಾಧ್ಯವಾಯಿತು. ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಬಗ್ಗೆ ಅರಿವು ಹೆಚ್ಚಿಸಿ ಪಠ್ಯಪುಸ್ತಕದ ಜ್ಞಾನವನ್ನು ನೈಜ ಪರಿಸ್ಥಿತಿಗಳೊಂದಿಗೆ ಸಂಪರ್ಕಿಸುವ ಅವಕಾಶವೂ ದೊರೆಯಿತು. ಇದರಿಂದ ವಿದ್ಯಾರ್ಥಿಗಳಲ್ಲಿ ಕೃಷಿ, ಪರಿಸರ ಮತ್ತು ಗ್ರಾಮೀಣ ಅಭಿವೃದ್ಧಿ ಕುರಿತ ಆಸಕ್ತಿ ಮತ್ತು ಕುತೂಹಲ ಮತ್ತಷ್ಟು ಹೆಚ್ಚಿಸಿತು. ಅಭಿನಂದನ ಕೆ.ಸಿ. ಜೈನ್, ಸಹಾಯಕ ಪ್ರಾಧ್ಯಾಪಕರು ಎಸ್.ಡಿ.ಎಂ ಕಾಲೇಜು ಉಜಿರೆ

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಕೂಡಬೆಟ್ಟು ದೇವಸ್ಥಾನ: ಗಣೇಶೋತ್ಸವ, ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya
error: Content is protected !!