25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

ಕೊಕ್ಕಡ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಬಳಿ ಮಾ.13ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಸಕಲೇಶಪುರದ ಬಳಿ ನಡೆದ ಮದುವೆಯ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಸನದಿಂದ ಉಜಿರೆ ಕಡೆಗೆ ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಧರ್ಮಸ್ಥಳದಿಂದ ಬೆಂಗಳೂರಿನ ಮೂಲಕ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಬರ್ಚಿನಹಳ್ಳಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರಲ್ಲಿ ಕೊಕ್ಕಡದಲ್ಲಿ ಎಸ್.ಆರ್. ಆಯಿಲ್ ಮಿಲ್ ಉದ್ಯಮಿ ಶಿಶಿಲ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ಕೂಡ ಸೇರಿದ್ದಾರೆ. ಮೃತ ಚಂದ್ರಶೇಖರ ಗೌಡ ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಿಗ್ಗೆ ಕೊಕ್ಕಡದಲ್ಲಿರುವ ಅವರ ಮಾಲಕತ್ವದ ಎಸ್.ಆರ್. ಆಯಿಲ್ ಮಿಲ್ ಆವರಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು, ಬಂಧುಗಳು ಹಾಗೂ ಹಿತೈಷಿಗಳು ಆಗಮಿಸಿ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಡಾ.ಬಿ.ಮೋಹನ್ ದಾಸ್ ಗೌಡ ಕೊಕ್ಕಡ, ನೆಲ್ಯಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಬಲ್ಯ, ಕೊಕ್ಕಡ ರಕ್ತೇಶ್ವರಿ ಪೆಟ್ರೋ ಪಾಯಿಂಟ್‌ನ ಉದ್ಯಮಿ ನಾರಾಯಣ ಗೌಡ ಸೇರಿದಂತೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು, ಕೊಕ್ಕಡದ ವರ್ತಕರು ಹಾಗೂ ಅನೇಕರು ಮೃತರ ಅಂತಿಮ ದರ್ಶನ ಪಡೆದರು.

ಇದೇ ವೇಳೆ ಮೃತರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಕೊಕ್ಕಡದ ಎಲ್ಲಾ ವರ್ತಕ ಬಂಧುಗಳು ಬೆಳಿಗ್ಗೆ ಸುಮಾರು ಒಂದು ಗಂಟೆಗಳ ಕಾಲ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya
error: Content is protected !!