28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ಇಂದು ಅನೇಕ ಅವಕಾಶಗಳು ಲಭ್ಯವಿದ್ದು, ಅವುಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಸಾಧನೆ ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 2022–23ನೇ ಸಾಲಿನ  ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್–2026’ ಉದ್ದೇಶಿಸಿ ಅವರು ಮಾತನಾಡಿದರು.

ಆಯುರ್ವೇದವು ವಿಶ್ವಮಟ್ಟದಲ್ಲಿ ಹೊಸ ಅವಕಾಶಗಳನ್ನು ತೆರೆದಿಟ್ಟಿರುವ ಕ್ಷೇತ್ರವಾಗಿದ್ದು, ವಿದ್ಯಾರ್ಥಿಗಳು ಆಶಾವಾದಿಗಳಾಗಿ ಗುರಿಯೆಡೆಗೆ ಸಾಗಬೇಕು.  ವಿದ್ಯಾಭ್ಯಾಸದ ಜೊತೆಗೆ ನಿರಂತರ ಅಭ್ಯಾಸ ಮತ್ತು ಪರಿಶ್ರಮ ಇದ್ದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಸಾಧ್ಯ.  ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ ಸೇರಿದಂತೆ ಹಲವು ವಿಭಾಗಗಳಲ್ಲಿ ಉತ್ತಮ ಬೇಡಿಕೆ ಇದ್ದು, ವಿದ್ಯಾರ್ಥಿಗಳು ಸಂಶೋಧನೆಯ ನೆಲೆಯಲ್ಲಿ ಔಷಧಿ ತಯಾರಿಕೆಯ ಮೂಲಕವೂ ಮುಂದುವರಿಬಹುದು.  ಸ್ವದೇಶಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರವೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಆಯುರ್ವೇದ ಔಷಧಿ ಸಂಬAಧಿತ ಗಿಡಗಳನ್ನು ಬೆಳೆಸಲು ದೊಡ್ಡ ಮಟ್ಟದ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಅವಕಾಶಗಳನ್ನು ಬಳಸಿಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಸಾಧನೆಗಾಗಿ ಕೆಲವೊಮ್ಮೆ ತ್ಯಾಗವೂ ಅಗತ್ಯವಾಗುತ್ತದೆ. ತಮ್ಮ ಜೀವನವೂ ಶೂನ್ಯದಿಂದ ಆರಂಭವಾಗಿ ಆಯುರ್ವೇದ ಕ್ಷೇತ್ರಕ್ಕೆ ಕೊಡುಗೆ ನೀಡುವ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂಬುದನ್ನು ವಿದ್ಯಾರ್ಥಿಗಳು ಅರಿತು ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.

ಡಾ. ಕೃಷ್ಣಕುಮಾರ್ ಯಾದವ್, ಡಾ. ನೇಹಾನ್ ಮತ್ತು ಡಾ. ಅಶ್ವಿತಾ ತಮ್ಮ ಮೂರು ವರ್ಷದ ಅಧ್ಯಯನ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ್ ಶೆಟ್ಟಿ, ಆಯುರ್ವೇದ ಕಾಲೇಜಿನ ವೈದ್ಯಕೀಯ ಅಧೀಕ್ಷಕಿ ಡಾ. ಸುರೇಖಾ ಪೈ, ಪದವಿ ವಿಭಾಗದ ಡೀನ್ ಡಾ. ಸ್ವಪ್ನ ಕುಮಾರಿ, ಆತ್ಮ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಸುಬ್ರಹ್ಮಣ್ಯ ಪದ್ಯಾಣ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಡಾ. ಗೀತಾ ಬಿ. ಮಾರ್ಕಂಡೆ ನಿರೂಪಿಸಿ, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ್ ಶೆಟ್ಟಿ ಸ್ವಾಗತಿಸಿ,  ಸ್ನಾತಕೋತ್ತರ ವಿಭಾಗದ ಡೀನ್  ಡಾ. ಮಂಜುನಾಥ ಭಟ್ ವಂದಿಸಿದರು.

Related posts

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya
error: Content is protected !!