33.8 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

ಸೌತಡ್ಕ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಉಡುಪಿಯ ಶ್ರೀ ನಿಹಾಲ್ ವಿಲ್ಸನ್, ಕಾರ್ಕಳದ ಶ್ರೀ ಸಂದೀಶ್, ಆತ್ರಾಡಿಯ ಶ್ರೀ ರಮೇಶ್ ನಾಯ್ಕ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಮಾ.15 ರಂದು ಸೌತಡ್ಕ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

ನಿವೃತ್ತ ಮಹಿಳಾ ಆರೋಗ್ಯ ಸಂದರ್ಶಕರು ಹಾಗೂ ಸೇವಾಭಾರತಿ POSH ಕಮಿಟಿಯ ಅಧ್ಯಕ್ಷರಾದ ಶ್ರೀಮತಿ ವಸಂತಿ ಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿ ದಿವ್ಯಾಂಗರಿಗೆ ಶುಭಹಾರೈಸಿ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಹ ಪ್ರಚಾರ ಪ್ರಮುಖ ಶ್ರೀ ಗಣೇಶ್ ಕೊಕ್ಕಡ, ಕೊಕ್ಕಡದ ಶ್ರೀಮತಿ ಮಾಳವಿಕ, ಸೇವಾಭಾರತಿ ಅಧ್ಯಕ್ಷರಾದ ಶ್ರೀ ವಿನಾಯಕ ರಾವ್, ಟ್ರಸ್ಟಿ ಶ್ರೀಮತಿ ಸ್ವರ್ಣಗೌರಿ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
error: Content is protected !!