25.4 C
ಪುತ್ತೂರು, ಬೆಳ್ತಂಗಡಿ
September 16, 2026
Uncategorized

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

ಕೊಕ್ಕಡ:ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ವೇಳೆ ಕಂಬವು ತಲೆಗೆ ಬಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಶಿವಪ್ಪ(37) ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ವಿದ್ಯುತ್ ಲೈನ್ ಕಂಬಗಳ ಅಳವಡಿಕೆ ಹಾಗೂ ಸಂಬಂಧಿತ ಕೆಲಸಗಳಲ್ಲಿ ನಿರತರಾಗಿದ್ದ ಶಿವಪ್ಪ ಅವರು ಸ್ಥಳೀಯವಾಗಿ ವಿವಿಧ ಕಡೆಗಳಲ್ಲಿ ಕಾರ್ಮಿಕರೊಂದಿಗೆ ಕೆಲಸ ಮಾಡುತ್ತಿದ್ದರು.

ಸೋಮವಾರ ಬೆಳಗ್ಗೆ ಎಂದಿನಂತೆ ಧರ್ಮಸ್ಥಳ ಸಮೀಪದ ಪ್ರದೇಶದಲ್ಲಿ ವಿದ್ಯುತ್ ಕಂಬ ಅಳವಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಸಂಜೆ ವೇಳೆಗೆ ಕೊಕ್ಕಡದ ಭಜನಾ ಮಂದಿರದ ಸಮೀಪ ಹಳೆಯ ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಕಂಬವು ನಿಯಂತ್ರಣ ತಪ್ಪಿ ಶಿವಪ್ಪ ಅವರ ತಲೆಗೆ ಬಡಿದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಮೃತದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ.

Related posts

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya
error: Content is protected !!