September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ಸಯೋಗದೊಂದಿಗೆ ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾ.16 ರಂದು ಬೆಳ್ತಂಗಡಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರೀಯಾ ಆಗ್ನೇಸ್ ಚಾಕೋ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳಾ ಸುರಕ್ಷತ ಅಗತ್ಯೆತೆಗಳ ಕುರಿತು ತಿಳಿಸಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಜೇಮ್ಸ್ ಪಟ್ಟೇರಿಲ್ ರವರು ಅಧ್ಯಕ್ಷತೆಯನ್ನು ವಹಿಸಿ, 25 ವರ್ಷಗಳ ಕಾಲ ಡಿ.ಕೆ .ಆರ್.ಡಿ ಎಸ್ ಸಂಸ್ಥೆಯ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ನಡೆಸಿದ ಶ್ರಮವನ್ನು ಅಭಿನಂದಿಸಿದರು. ಬೆಳ್ತಂಗಡಿ ಧರ್ಮಪ್ರಾಂತ್ಯದ ನಿಕಟಪೂರ್ವ ಧರ್ಮಾಧ್ಯಕ್ಷ ಅತೀ. ವಂದನೀಯ ಲಾರೆನ್ಸ್ ಮುಕ್ಕುಯಿ ಆಶೀರ್ವಚನ ನೀಡಿದರು.

ಸಂಸ್ಥೆಯ ನಿಕಟ ಪೂರ್ವ ಹಾಗೂ ಪ್ರಸ್ತುತ ಧರ್ಮಾಧ್ಯಕ್ಷರನ್ನು ವೇದಿಕೆಯಲ್ಲಿ ಸನ್ಮಾಸಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ನಿಕಟಪೂರ್ವ ಧರ್ಮಾಧ್ಯಕ್ಷರಾದ ಅತೀ. ವಂದನೀಯ ಲಾರೆನ್ಸ್ ಮುಕ್ಕುಯಿ, ಸಂಸ್ಥೆಯ ನಿಕಟಪೂರ್ವ ನಿರ್ದೇಶಕರಾಗಿರುವ ವಂದನೀಯ ಫಾ. ತೊಮಸ್ ಕಣ್ಣಾಂಗಲ್, ಹಾಗೂ ಪ್ರಸ್ತುತ ನಿರ್ದೇಶಕರಿಗಿರುವ ವಂದನೀಯ ಫಾ.‌ ಬಿನೋಯಿ ಎ.ಜೆ.ರವರನ್ನು ಹಾಗೂ ಸ್ವಸಹಾಯ ಸಂಘಗಳಿಂದ ಆಯ್ಕೆಯಾದ ಇಪ್ಪತ್ತೈದು ಮಂದಿ ಸಾಧಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ವಂ. ಫಾ. ರಿಚರ್ಡ್ ಪಾಯ್ಸ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕಿ ಸಿ. ನ್ಯಾನ್ಸಿ ಲೋಬೋ, ಮಾನಿನಿ ಮಹಿಳಾ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ.ಜೆ. ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಸ್ವಾಗತಿಸಿದರು.‌ ಸಭಾ ಕಾರ್ಯಕ್ರಮದ ನಂತರ ಸ್ವಸಹಾಯ ಸಂಘಗಳ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಸಿಸಿಲಿಯ ತಾವ್ರೋ ಹಾಗೂ ಜಿನ್ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾರ್ಥನೆಯನ್ನು ಸೌರಭ ಸ್ವ-ಸಹಾಯ ಸಂಘದ ಸದಸ್ಯರು ನಿರ್ವಹಿಸಿದರು. ವಿವಿಧ ಸಂಘಗಳಿಂದ ಸುಮಾರು 483 ರಷ್ಟು ಮಹಿಳೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!