22.2 C
ಪುತ್ತೂರು, ಬೆಳ್ತಂಗಡಿ
September 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು ಬೆಳಗ್ಗೆ ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಆರಂಭಿಸಿದೆ.

ಪ್ರಕರಣದ ವಿವರ: ಬೆಳ್ತಂಗಡಿ ನಗರದ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್ ಸೊಸೈಟಿ(ರಿ) ನಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣ ವಾಪಸ್ ಗ್ರಾಹಕರಿಗೆ ನೀಡದೆ ವಂಚನೆ ಮಾಡಿರುವುದು ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಂಚನೆಗೊಳಗಾದ ಬೆಳ್ತಂಗಡಿ ನಿವಾಸಿ ದಯಾನಂದ ನಾಯಕ್ ಸೇರಿ ಒಟ್ಟು 13 ಜನ ನೊಂದವರು 22-05-2025 ರಂದು ಸೊಸೈಟಿಯ 14 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ 23-05-2025 ರಂದು KARNATAKA PROTECTION OF INTEREST DEPOSITIONS EXORBITANT ACT 2004 (u/s -9) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸೈಬರ್ ಕ್ರೈಂ ಹೋಗಿ ಇದೀಗ ಸಿಐಡಿಗೆ ಹಸ್ತಾಂತರವಾಗಿ ತನಿಖೆ ಆರಂಭವಾಗಿದೆ.

ಪ್ರಕರಣ 14 ಮಂದಿ ಆರೋಪಿಗಳು: 2021 ರಿಂದ 2024 ರ ವರೆಗೆ ಬ್ಯಾಂಕ್ ನಲ್ಲಿ ಜವಾಬ್ದಾರಿಯಲ್ಲಿದ್ದ 40 ಕೋಟಿ ರೂಪಾಯಿ ಹಣ (ವಂಚನೆ) ಹಗರಣದ ಲ್ಲಿ ಬ್ಯಾಂಕ್ ಸಿಇಒ ಚಂದ್ರಕಾಂತ್, ಅಧ್ಯಕ್ಷ ಪ್ರಭಾಕರ ಸಿ.ಹೆಚ್, ಉಪಾಧ್ಯಕ್ಷ ಸದಾನಂದ ಎಮ್ ಉಜಿರೆ, ಡೈರೆಕ್ಟರ್ ಗಳಾದ ವಿಶ್ವನಾಥ ಆರ್.ನಾಯಕ್, ಪ್ರಮೋದ್ ಆರ್‌. ನಾಯಕ್, ವಿಶ್ವನಾಥ, ಜಗನ್ನಾಥ ಪಿ, ರತ್ನಾಕರ, ಸುಮ ದಿನೇಶ್ ಉಜಿರೆ ನಯನ ಶಿವಪ್ರಸಾದ್, ಮೋಹನ್ ದಾಸ್ ಕೆ, ಕಿಶೋರ್ ಕುಮಾರ್ ಲಾಯಿಲ, ಬ್ಯಾಂಕ್ ಸಿಬ್ಬಂದಿ ಸರಿತಾ ಎಸ್ ಮತ್ತು ವಿನೋದ್ ಕುಮಾರ್ ಸಿ.ಹೆಚ್ ಸೇರಿ ಒಟ್ಟು 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ದೂರು ನೀಡಿದ್ದ 13 ಮಂದಿ ನೊಂದವರು: ದಯಾನಂದ ನಾಯಕ್, ನಿಧೀಶ್‌ ಡಿ. ನಾಯಕ್, ಶ್ರದ್ಧಾ ಬಿ, ಮಾಲಿನಿ ಟಿ. ರಾವ್, ತುಕರಾಮ್ ರಾವ್, ಅಕ್ಷಯಾ ಟಿ. ರಾವ್, ಅಕ್ಷತಾ ರಾವ್, ಚೈತ್ರಾ ಭಟ್, ಮೈತ್ರಿ ಭಟ್, ಸ್ವಾತಿ ಭಟ್, ನಂದಕುಮಾರ್, ಬಿ. ಗಣೇಶ್ ಭಟ್, ವಿದ್ಯಾ ಭಟ್ ಸೇರಿ 13 ಮಂದಿ ನೊಂದವರು ದೂರು ನೀಡಿದ್ದರು.

ಆಸ್ತಿ ಮುಟ್ಟುಗೋಲಿಗೆ ನೋಟಿಸ್ ಜಾರಿಯಾಗಿತ್ತು:  ಅಧ್ಯಕ್ಷ ಸಿ.ಹೆಚ್. ಪ್ರಭಾಕರ, ನಿರ್ದೇಶಕರಾದ ವಿಶ್ವನಾಥ ಆರ್. ನಾಯಕ್, ವಿಶ್ವನಾಥ, ಪ್ರಮೋದ್ ಆರ್.ನಾಯಕ್, ಕಿಶೋರ್ ಲಾಯಿಲ, ಪಿ.ಜಗನ್ನಾಥ್, ರತ್ನಾಕರ ಶೇರಿಗಾರ್, ನಯನ ಶಿವಪ್ರಸಾದ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಚಂದ್ರಕಾಂತ್, ಸಿಬ್ಬಂದಿ ಸರಿತಾ ಇವರು ಹತ್ತು ಮಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನ್ಯಾಯಾಲಯದಿಂದ 05-06-2025 ರಂದು ನೋಟಿಸ್ ಜಾರಿಯಾಗಿತ್ತು. ಇಲ್ಲವಾದರೆ 30,45,24,278 (ಮೂವತ್ತು ಕೋಟಿ ನಲವತ್ತೈದು ಲಕ್ಷದ ಇಪ್ಪತೈದು ಸಾವಿರದ ಇನ್ನೂರ ಇಪ್ಪತ್ತೆಂಟು ರೂಪಾಯಿ) ಭದ್ರತಾ ಠೇವಣಿ ಇಡಲು ಅವಕಾಶ ನೀಡಲಾಗಿತ್ತು. ಈ ನೋಟಿಸ್ ವಿರುದ್ಧ ಹೈಕೋರ್ಟ್ ಹೋಗಿ ಸ್ಟೇ ತಂದಿದ್ದರು. ಈ ಬಗ್ಗೆ ಸುದ್ದಿ ಉದಯ ವರದಿ ಕೂಡ ವರದಿ ಮಾಡಿತ್ತು.

ಸಿಐಡಿ ತನಿಖೆ ಆರಂಭ: ರೂ.40 ಕೋಟಿ ವಂಚನೆ ಪ್ರಕರಣವಾಗಿರುವ ಕಾರಣದಿಂದ ಈ ತನಿಖೆಯನ್ನು ಬೆಳ್ತಂಗಡಿ ಪೊಲೀಸ್ ಸೈಬರ್ ಕ್ರೈಂಗೆ ಹಸ್ತಾಂತರ ಮಾಡಿದ್ದರು ಬಳಿಕ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಗಳು ಸಿಐಡಿ( Crime Investigation Department) ಗೆ ಹಸ್ತಾಂತರಿಸಿದ ಹಿನ್ನೆಲೆಯಲ್ಲಿ ಇದೀಗ ಅಧಿಕೃತವಾಗಿ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್ ಹರೀಶ್ ನೇತೃತ್ವದ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ.

Related posts

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya
error: Content is protected !!