32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳುಸಾಧಕರು

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕು. ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ.16ರಂದು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕಿತಾ ಶೆಟ್ಟಿ ಯವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ ಮಹಿಳಾ ಕ್ರೀಡಾಪಟುಗಳಿಗೆ ಕೊಡುತ್ತಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳ ಬಗ್ಗೆ ಗಮನ ಸೆಳೆದರು.

ತಾಲೂಕಿನ ಯುವ ವಕೀಲೆ ಕು. ಸೌಮ್ಯ ಪಿ ಮಹಿಳೆಯರಿಗೆ ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರಕಾರ ಕೊಡುತ್ತಿರುವ ಮಹತ್ವದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಬೆಳಾಲು ಮಾತನಾಡಿ ,ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮ ಆರೋಗ್ಯಕ್ಕೂ ಮಹತ್ವ ಕೊಡಬೇಕು. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಸಿರಿಧಾನ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಡಬೇಕು ಅನ್ನುವ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಕಮಲಾಕ್ಷಿ, ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಆಶಾ ಸಲ್ಧಾನ, ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ಸ್ವಾಗತಿಸಿ, ನಿರೂಪಿಸಿ, ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya
error: Content is protected !!