25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದ ಘಟನೆ ಅತ್ಯಂತ ಕ್ರೂರ, ಮಾನವೀಯತೆಯಿಲ್ಲದ ಹಾಗೂ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತದ್ದಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಅಪ್ರಾಪ್ತ ಬಾಲಕನನ್ನು ಧರ್ಮದ ಆಧಾರದ ಮೇಲೆ ಗುರುತಿಸಿ ಹಲ್ಲೆ ನಡೆಸಿರುವುದು ಸಂಘಟಿತ ದ್ವೇಷ ರಾಜಕಾರಣದ ಪ್ರತಿಫಲವಾಗಿದೆ. “ಅನೈತಿಕ ಪೊಲೀಸ್ ಗಿರಿ” ಎಂಬ ಹೆಸರಿನಲ್ಲಿ ಕೆಲ ಸಂಘಪರಿವಾರದ ಕಾರ್ಯಕರ್ತರು ಕಾನೂನನ್ನು ಕೈಗೆತ್ತಿಕೊಂಡು ನಿರಪರಾಧ ಯುವಕರ ಮೇಲೆ ದೌರ್ಜನ್ಯ ಎಸಗುತ್ತಿರುವುದು ಅತ್ಯಂತ ಖಂಡನೀಯ ಎಂದು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಗುಂಪಾಗಿ ಹಲ್ಲೆ ನಡೆಸಿರುವುದು ಹಾಗೂ ಬಳಿಕ ಜೀವಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿರುವುದು ಗಂಭೀರ ಅಪರಾಧವಾಗಿದ್ದು, ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ.
ಈ ಹಿನ್ನೆಲೆಯಲ್ಲಿ ಆರೋಪಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್.ಡಿ.ಪಿ.ಐ ಆಗ್ರಹಿಸುತ್ತದೆ.

ಸಂತ್ರಸ್ತ ಬಾಲಕನಿಗೆ ನ್ಯಾಯ ದೊರಕುವವರೆಗೆ ಹೋರಾಟ ನಡೆಸುವುದಾಗಿ ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
error: Content is protected !!