36.1 C
ಪುತ್ತೂರು, ಬೆಳ್ತಂಗಡಿ
March 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

ಕನ್ಯಾಡಿ: ದಕ್ಷಿಣದ ಅಯೋಧ್ಯೆಯೆಂದೇ ಕರೆಯಲ್ಪಡುವ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್, ನಿತ್ಯಾನಂದ ನಗರ, ಧರ್ಮಸ್ಥಳದಲ್ಲಿ ಮಾ.20 ರಿಂದ ಮಾ.27 ರವರೆಗೆ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾಬ್ರಹ್ಮ ರಥೋತ್ಸವವು ಬಹಳ ವಿಜೃಂಭನೆಯಿಂದ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.

ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ರಾಮ ಜಯ ರಾಮ ಜಯ ಜಯ ರಾಮ ಎಂಬ ತಾರಕ ಮಂತ್ರವನ್ನು ಈ ಪುಣ್ಯ ಕ್ಷೇತ್ರದಲ್ಲಿ ಪಠಿಸಲು ಪ್ರಾರಂಭಿಸಿ ಸುಮಾರು ೬೬ ವರ್ಷಗಳೇ ಆಗಿದೆ. ರಾಜ್ಯದ ಯಾವುದೇ ಮೂಲೆಯಲ್ಲಿ ಕಂಡು ಕೇಳರಿಯದ ಈ 7 ದಿನಗಳ ಆಹೋರಾತ್ರಿ ನಡೆಯುವ ಭಜನೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಭಜನಾ ತಂಡಗಳು ಬಂದು ಭಜನಾ ಸಪ್ತಾಹದಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆಯುತ್ತಾರೆ.

ವರ್ಷಂಪ್ರತಿಯಂತೆ ಈ ವರ್ಷವೂ ಮಾ.20 ರಂದು ಬೆಳಗ್ಗೆ 9.30 ಗಂಟೆಗೆ ಶ್ರೀ ರಾಮ ನಾಮ ಸಪ್ತಾಹದ ಅಖಂಡ ನಂದಾ ದೀಪವನ್ನು ಬೆಳಗಿಸುವ ಮುಖೇನ ಜಾತ್ರೋತ್ಸವದ ಉದ್ಘಾಟನೆ ನಡೆಯಲಿರುವುದು ಹಾಗೂ ಶ್ರೀ ರಾಮ ಜಯ ರಾಮ ಜಯ ಜಯ ರಾಮ ಎಂಬ ತಾರಕ ಮಂತ್ರದ ನಾಮೋಚ್ಛಾರಣೆ ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲಾ ಉಸ್ತುವಾರಿ ಸಚಿವ ದನೇಶ್ ಗುಂಡೂರಾವ್ ಸೇರಿದಂತೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಬಹುತೇಕ ಸಚಿವರುಗಳು, ಮಾಜಿ ಸಚಿವರುಗಳು, ಜಿಲ್ಲೆಯ ಎಲ್ಲಾ ಮಾಜಿ ಶಾಸಕರುಗಳು, ಶ್ರೀ ಕ್ಷೇತ್ರದ ಎಲ್ಲಾ ಗೌರವಾನ್ವಿತ ಟ್ರಸ್ಟಿಗಳು, ಅಭಿವೃದ್ಧಿ ಸಮಿತಿ ಸದಸ್ಯರುಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿರುವರು.

ಈ ಜಾತ್ರೋತ್ಸವದಲ್ಲಿ ದಿನಂಪ್ರತಿ ಕ್ಷೇತ್ರದಲ್ಲಿ ಆರಾಧಿಸಲ್ಪಡುವ ಎಲ್ಲಾ ಪರಿವಾರ ದೇವರುಗಳ ಬಲಿ ಉತ್ಸವಗಳು ಹಾಗೂ ಚಂದ್ರಮಂಡಲ ರಥ, ಪಷ್ಪರಥ, ಬೆಳ್ಳಿರಥ, ಹನುಮಾನ್ ರಥೋತ್ಸವಗಳು ನಡೆಯಲಿದ್ದು, ಮಾ.27 ರಂದು ಸಾಯಂಕಾಲ 6 ಗಂಟೆಯಿಂದ ಕ್ಷೇತ್ರದಲ್ಲಿ ದೇವರ ಪಾಲಕಿ ಬಲಿ ಉತ್ಸವ, ಬ್ರಹ್ಮ ರಥೋತ್ಸವ ಹಾಗೂ ರಕ್ತಶ್ವರಿ, ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿರುವುದು.

ಮಾ.29 ರಂದು ಶ್ರೀ ಗುರುದೇವ ಮಠಕ್ಕೆ ಸಂಬಂಧಪಟ್ಟ ಆದಿ ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ದೈವದ ನೇಮೋತ್ಸವ ನಡೆಯಲಿರುವುದು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಜಾತ್ರೋತ್ಸವವು ಜಗದ್ಗುರು ಪೀಠದ ಪೀಠಾಧೀಶರಾದ ಮಹಾ ಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ಕೃತಿಜೀ ಮಹಾರಾಜ್ ರವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವುದಾಗಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಶಬರಿಮಲೆ, ಬೆಂಗಳೂರು, ತಿರುಪತಿ, ಶಿವಮೊಗ್ಗದಲ್ಲಿ ಶಾಖಾ ಮಠ
ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆಯ ಬಾರಕೂರು ಸಮೀಪ ಬಲ್ಲಾಡಿ ಎಂಬಲ್ಲಿ ಸುಮಾರು ೨೦ ಎಕ್ರೆ ಜಾಗದಲ್ಲಿ ಸುಮಾರು 200 ವಿದ್ಯಾರ್ಥಿಗಳು ಉಚಿತ ಐಟಿಐ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದು, ಪ್ರತಿ ವರ್ಷ ೧೦೦% ಉತ್ತೀರ್ಣರಾಗುತ್ತಿದ್ದು ಸಂಪೂರ್ಣ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕಂಪೆನಿಗಳಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಉದ್ಯೋಗವನ್ನು ಕಲ್ಪಿಸಿಕೊಡಲಾಗಿದೆ. ಹಾಗೇನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ಸಮುದ್ರ ಕಿನಾರೆಯಲ್ಲಿ ಧ್ಯಾನ ಮಂದಿರದ ಹೆಸರಿನಲ್ಲಿ ಶಾಖಾ ಮಠ ನಿರ್ಮಾಣವಾಗಿದೆ. ೮೦೦ ವರ್ಷದ ಹಿಂದಿನಿAದ ಬಂದ ಮೂಲ ಮಠ ನಿಚ್ಚಲ ಮಕ್ಕಿ ವೆಂಕಟೇಶ್ವರ ದೇವಾಲಯ ನಮ್ಮ ನೇತೃತ್ವದಲ್ಲಿ ನಡೆಯುತ್ತಿದೆ. ಶಿರಾಲಿಯ ಶ್ರೀ ಹನುಮಾನ್ ದೇವಸ್ಥಾನವೂ ನಮ್ಮ ಸುಪರ್ದಿಯಲ್ಲಿ ಇರುತ್ತದೆ. ದೇವಭೂಮಿ ಹರಿದ್ವಾರದಲ್ಲಿ ಶಾಖಾ ಮಠ ಪ್ರಾರಂಭವಾಗಿ ಸುಮಾರು ೧೦ ವರ್ಷಗಳಾಗಿದೆ. ಚಾರ್ ಧಾಮ್ ಯಾತ್ರಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಪ್ರಸ್ತುತ ಅಯೋಧ್ಯೆಯ ಶ್ರೀ ರಾಮ ಮಂದಿರದ ಸಮೀಪದಲ್ಲಿ ಸುಮಾರು ೧ ಎಕ್ರೆ ಜಾಗವನ್ನು ಖರೀದಿ ಮಾಡಿ ಈಗಾಗಲೇ ಅದರ ಕಾಮಗಾರಿ ನಡೆಯುತ್ತಿದೆ. ಮುಂದಿನ ದಿವಸಗಳಲ್ಲಿ ಶಬರಿಮಲೆ, ಬೆಂಗಳೂರು, ತಿರುಪತಿ, ಶಿವಮೊಗ್ಗದಲ್ಲಿ ಶಾಖಾ ಮಠವನ್ನು ತೆರೆಯುವ ಯೋಜನೆ ಇದೆ. ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Related posts

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya
error: Content is protected !!