38.4 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

ಪತ್ರಿಕಾಗೋಷ್ಠಿ

ಉಜಿರೆ: ಆಳ್ವಾಸ್ ನುಡಿಸಿರಿ-ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯ ವೇದಿಕೆಯಲ್ಲಿ ಮಾರ್ಚ್ 22ರ ಭಾನುವಾರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು.

ಅವರು ಮಾ,೨೦ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಾಂಸ್ಕೃತಿಕ ವೈಭವಕ್ಕೆ ಮೊದಲು ಸುಮಾರು ೪೫ ನಿಮಿಷಗಳ ಕಾಲ ಸಭಾಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಮುಖ್ಯಸ್ಥ ಶರತ್ ಕೃಷ್ಣ ಪಡ್ಡೆಟ್ನಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಘಟಕದ ಗೌರವಾದ್ಯಕ್ಷ ಲಕ್ಷ್ಮೀ ಗ್ರೂಪ್ ಕನಸಿನ ಮನೆ ಉಜಿರೆಯ ಕೆ. ಮೋಹನ್ ಕುಮಾರ್, ಗೌರವ ಸಲಹೆಗಾರ ಶಶಿಧರ ಶೆಟ್ಟಿ ಬರೋಡಾ ಹಾಗೂ ಸಮಾಜದ ಎಲ್ಲಾ ಸ್ತರಗಳ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಆಳ್ವಾಸ್ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಘಟಕಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ವಿಜಯರಾಘವ ಪಡ್ವೆಟ್ನಾಯ, ಪ್ರೊ. ಎಸ್. ಪ್ರಭಾಕರ್ ಹಾಗೂ ಕೀರ್ತಿಶೇಷ ಡಾ. ಬಿ. ಯಶೋವರ್ಮರವರಿಗೆ ಅರ್ಪಿಸಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ೫೦೦ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಿದರು.

ಪ್ರೇಕ್ಷಕರಿಗಾಗಿ ೮೦೦೦ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕಾರ್ಯಕ್ರಮವು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ. ಆಳ್ವಾಸ್ ಸಾಂಸ್ಕೃತಿಕ ವೈಭವವು ಕರ್ನಾಟಕದ ಅತ್ಯಂತ ಪ್ರಸಿದ್ಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ಕೇವಲ ಒಂದು ಕಾರ್ಯಕ್ರಮವಲ್ಲ, ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ವೈವಿಧ್ಯತೆಯ ಸೊಬಗನ್ನು ಒಂದೇ ವೇದಿಕೆಯಲ್ಲಿ ಕಣ್ಣುಂಬಿಸಿಕೊಳ್ಳಲು ಇರುವ ಸುಂದರ ಅವಕಾಶವಾಗಿದೆ ಎಂದು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ರವೀಂದ್ರ ಶೆಟ್ಟಿ ಸುರಭಿ ಉಜಿರೆ, ವಸಂತ ಶೆಟ್ಟಿ ಶ್ರದ್ಧಾ, ವೆಂಕಟ್ರಮಣ ಶೆಟ್ಟಿ, ಅಳ್ವಾಸ್ ಕಾಲೇಜಿನ ಉಪನ್ಯಾಸಕ ಹಾಗೂ ಕಾರ್ಯಕ್ರಮ ಸಂಯೋಜಕ ಅಂಬರೀಶ್ ಚಿಪ್ಲೂಣ್ಕರ್, ಶಾಲೆಟ್ ಮೋನಿಸ್, ಮಂಜಿತ್ ಶೆಟ್ಟಿ , ಕೀರ್ತನ್ ಪೂಂಜ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾರಾಯಣ ಉಪಸ್ಥಿತರಿದ್ದರು.

Related posts

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya
error: Content is protected !!