26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

ಕನ್ಯಾಡಿ: ಜಗದ್ಗುರು ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ನೇತೃತ್ವದಲ್ಲಿ ದಕ್ಷಿಣದ ಅಯೋಧ್ಯೆಯೆಂದೇ ಕರೆಯಲ್ಪಡುವ ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾಬ್ರಹ್ಮ ರಥೋತ್ಸವವು ಮಾ.20 ರಿಂದ ಪ್ರಾರಂಭಗೊಂಡು ಮಾ.27ರವರೆಗೆ ನಡೆಯಲಿದೆ.

ಮಾ.20ರಂದು ಬೆಳಿಗ್ಗೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀರಾಮ ನಾಮ ಸಪ್ತಾಹದ ಅಖಂಡ ನಂದಾದೀಪವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರು, ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಮುಖರಾದ ಭಗೀರಥ ಜಿ, ರಕ್ಷಿತ್ ಶಿವರಾಂ, ಸುಜೀತಾ ವಿ ಬಂಗೇರ, ಟ್ರಸ್ಟಿ ಪೀತಾಂಬರ ಹೆರಾಜೆ, ಸಂಜೀವ ಪೂಜಾರಿ ಸಜೀಪಮುನ್ನೂರು, ಜಯಂತ್ ಕೋಟ್ಯಾನ್ ಮರೋಡಿ, ನಾಗೇಶ್ ಕುಮಾರ್ ಕೊಕ್ಕಡ, ಪ್ರೀತಮ್ ಡಿ ಧರ್ಮಸ್ಥಳ, ರತ್ನಾಕರ ಬುಣ್ಣನ್ ಮರೋಡಿ, ರವಿ ಕುಮಾರ್ ಬರಮೇಲು, ಇಂಜಿನಿಯರ್ ರಾಹುಲ್ ಪಿ, ರವೀಂದ್ರ ಪೂಜಾರಿ ಆರ್ಲ, ಪ್ರತೀಮಾ ಬಿ, ಸುಜತಾ ಅಣ್ಣಿ ಪೂಜಾರಿ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಮುಖರಾದ ಸಂಜೀವ ಪೂಜಾರಿ ಬಿರ್ವ ಸೆಂಟರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ತಿಮ್ಮಪ್ಪ ಗೌಡ ಬೆಳಾಲು, ಪ್ರಶಾಂತ್ ಪಾರೆಂಕಿ, ಉದ್ಯಮಿ ಅಭಿನಂದನ್ ಹರೀಶ್ ಕುಮಾರ್, ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ,ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಶಿವಕಾಂತ ಗೌಡ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ರಾಜೇಶ್ ಪೂಜಾರಿ ಮೂಡುಕೋಡಿ,ನೀಲಕಂಠ ಶೆಟ್ಟಿ, ಗ್ರಾ. ಪ. ಮಾಜಿ ಸದಸ್ಯ ಹರೀಶ್ ಸುವರ್ಣ ಕನ್ಯಾಡಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್, ಉಜಿರೆ ಗ್ರಾಮ ಪ. ಮಾಜಿ ಉಪಾಧ್ಯಕ್ಷ ರವಿ ಕುಮಾ‌ರ್ ಬರಮೇಲು, ಬಾಲಕೃಷ್ಣ ಶೆಟ್ಟಿ ಸವಣಾಲು, ವಾಣಿಜ್ಯ ತೆರಿಗೆ ಅಧಿಕಾರಿ ರಾಜು ನಾಯ್ಕ, ಪುರುಷೋತ್ತಮ ಧರ್ಮಸ್ಥಳ, ಚಿದಾನಂದ ಇಡ್ಯಾ, ಸುನಿಲ್ ಕನ್ಯಾಡಿ, ರವೀಂದ್ರ ಪೂಜಾರಿ ಆರ್ಲ, ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ, ಸೀತರಾಮ ಬೆಳಾಲು, ಯತೀಶ್ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಗುರುದೇವ ಮಠ ಟ್ರಸ್ಟಿ ಮತ್ತು ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಟ್ರಸ್ಟ್ ನ ಟ್ರಸ್ಟಿಗಳು, ರಾಮ ಕ್ಷೇತ್ರ ಅಭಿವೃದ್ಧಿ ಸಮಿತಿ ಸದಸ್ಯರು. ವಿವಿಧ ಭಜನಾ ಮಂಡಳಿ ಸದಸ್ಯರು, ರಥ ಬೀದಿ ವ್ಯಾಪಾರಸ್ಥರು, ಭಕ್ತರು ಉಪಸ್ಥಿತರಿದ್ದರು.


Related posts

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಪಿಲ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬರಾಯಕೆರೆಗೆ ಹಾನಿ : ಅಳದಂಗಡಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ: ಸ್ಥಳ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!