ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ.26 ರoದು ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ 19 ರoದು ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಕಾರ್ಯದರ್ಶಿ ವಿನೋದ್ ಶೆಣೈ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯ ನಿತೇಶ್ ಕೆ., ಮದ್ದಡ್ಕ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು













