20.8 C
ಪುತ್ತೂರು, ಬೆಳ್ತಂಗಡಿ
March 20, 2026
ತಾಲೂಕು ಸುದ್ದಿವರದಿ

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

ಬೆಳ್ತಂಗಡಿ: ಕರಾವಳಿ ಜಿಲ್ಲೆಗಳ ಮುಸ್ಲಿಂ ಬಾಂಧವರು ಕಳೆದ ಒಂದು ತಿಂಗಳಿನಿಂದ ಶ್ರದ್ಧಾ, ಭಕ್ತಿಯಿಂದ ಆಚರಿಸುತ್ತಿದ್ದ ಪವಿತ್ರ ರಂಜಾನ್ ಉಪವಾಸ ವ್ರತಕ್ಕೆ ಗುರುವಾರ ತೆರೆ ಬಿದ್ದಿದ್ದು, ಶುಕ್ರವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ‘ಈದುಲ್ ಫಿತ್’ ಹಬ್ಬವನ್ನು ಆಚರಿಸಲಾಗುತ್ತದೆ. ಮಾ . 19ರಂದು ಸಂಜೆ ಆಕಾಶದಲ್ಲಿ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ, ಮಾ.20(ಶುಕ್ರವಾರ) ಈದ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.

Related posts

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya
error: Content is protected !!