September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆಯು ಮಾ. 21ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ವಿಜಯ ಗೌಡ ವೇಣೂರು ವಹಿಸಿದ್ದರು.


ವೇದಿಕೆಯಲ್ಲಿ ತಾಲೂಕು ಯುವಜನ ಒಕ್ಕೂಟದ ಗೌರವಾಧ್ಯಕ್ಷ ರಮಾನಂದ ಮುಂಡೂರು, ಜಿಲ್ಲಾ ಗೌರವಾಧ್ಯಕ್ಷ ರಾಜೀವ್‌ ಸಾಲ್ಯಾನ್‌ ಹಾಗೂ ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯಾ ಉಪಸ್ಥಿತರಿದ್ದರು.
ಸಭೆಯಲ್ಲಿ ಅಧ್ಯಕ್ಷರು ಯುವಜನ ಒಕ್ಕೂಟದ ಮುಂದಿನ ಕಾರ್ಯಯೋಜನೆಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಸಭೆಯಲ್ಲಿ ಯುವಜನ ಒಕ್ಕೂಟದ ಪ್ರಮುಖರಾದ ಜಯಾನಂದ ಲಾಯಿಲ, ಸಿ.ಕೆ. ಚಂದ್ರಕಲಾ, ಸೌಮ್ಯ ಲಾಯಿಲ, ಸಾಂತಪ್ಪ ಮುಂಡಾಜೆ, ಅರುಣಾಕ್ಷಿ ಬದನಾಜೆ ಸೇರಿದಂತೆ ವಿವಿಧ ಯುವಕ-ಯುವತಿ ಮಂಡಳಿಗಳ ಸದಸ್ಯರು ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯಾ ಪ್ರಸ್ತಾವನೆಯೊಂದಿಗೆ ಸಭೆಯನ್ನು ಪ್ರಾರಂಭಿಸಿ, ಕೊನೆಯಲ್ಲಿ ಧನ್ಯವಾದ ಅರ್ಪಿಸಿದರು.

Related posts

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya
error: Content is protected !!