September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

ಬೆಳ್ತಂಗಡಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಮಾ.21 ರಂದು ಬೆಳಗ್ಗೆ ಘಟನೆ ನಡೆದಿದೆ.

ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya
error: Content is protected !!