ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

ಕಳೆಂಜ: ಕಾಯರ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ ಕಾರ್ಯಕ್ರಮವು ಮಾ.22ರಂದು ನೆರವೇರಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಶಾಲೆಗಳ ಸಮಗ್ರ ಅಭಿವೃದ್ಧಿಗೆ ರ‍್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ಅವಧಿಯಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ಈ ಶಾಲೆಗೆ ಎರಡು ಕೊಠಡಿಗಳನ್ನು ಒದಗಿಸಲಾಗಿತ್ತು. ಇದೀಗ ಶತಮಾನೋತ್ಸವದ ಹಿನ್ನೆಲೆ ಹೆಚ್ಚುವರಿ ತರಗತಿ ಕೊಠಡಿಗಳ ಅಗತ್ಯ ಉಂಟಾಗಿದ್ದು, ರ‍್ಕಾರದಿಂದ ಅನುದಾನ ಸಿಗದ ಹಿನ್ನೆಲೆ ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್‌ಆರ್ ನಿಧಿ ಮೂಲಕ ಸಂಸದರ ಸಹಕಾರದೊಂದಿಗೆ ಇನ್ನೂ ಎರಡು ಕೊಠಡಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು
ತಿಳಿಸಿದರು. ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಇದೇ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳ ಸಂಸದರ ನಿಧಿಯಿಂದ ತಾಲೂಕಿನ ಎಲ್ಲಾ ಶಾಲೆಗಳಿಗೆ ಸ್ಮಾರ್ಟ್ ಟಿವಿ ವಿತರಿಸಲಾಗುತ್ತಿದ್ದು,ಕಾಯರ್ತಡ್ಕ ಶಾಲೆಯೂ ಇದರ ಪ್ರಯೋಜನ ಪಡೆದಿದೆ. ಇದು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಚಿಗುರು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಅಂಗರಂಡ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವಿಜಯ್ ಕೆ, ಕಾರ‍್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಜಯಕುಮಾರ್ ಹೆಚ್, ಮುಖ್ಯ ಶಿಕ್ಷಕ ಕೃಷ್ಣಪ್ಪ, ಪಂಚಾಯತ್ ನಿಕಟಪರ‍್ವ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತಕಜೆ, ನಿಕಟಪರ‍್ವ ಸದಸ್ಯ ಹರೀಶ್ ಕೊಯ್ದ ಸೇರಿದಂತೆ ಅನೇಕ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಶಾಲೆಯ ಪರಿಚಯ ನೀಡಿ ಪ್ರಸ್ತಾವಿಕ ಭಾಷಣ ಮಾಡಿದರು. ಶಿಕ್ಷಕಿ ಲಾವಣ್ಯ ಸ್ವಾಗತಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆ ಸಲ್ಲಿಸಿದರು. ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರೋಸಾ ವಿ.ಟಿ. ವಂದಿಸಿದರು.

Related posts

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!