September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಇತ್ತೀಚೆಗೆ ಓಡಿಶಾದ ಭುವನೇಶ್ವರದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 11 ಜನ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ ಉತ್ತಮ ಸಾಧನೆ ತೋರಿದ್ದಾರೆ.

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳು, ಪುರುಷ ತಂಡದಲ್ಲಿ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿ ಸುಭಾಷ್ ರಾಜ್, ದ್ವಿತೀಯ ಬಿಕಾಂ ವಿದ್ಯಾರ್ಥಿ ಮಯೂರ್ ಹಾಗು ಪ್ರತೀಕ್ ಪಾಲ್ಗೊಂಡಿದ್ದರು. ಮಹಿಳೆಯರ ವಿಭಾಗದ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಲಾಸ್ಯ, ಅಪೂರ್ವ, ಸ್ಮಿತಾ, ವರ್ಷಾ , ಜೆಸ್ಲಿನ್ , ದ್ವಿತೀಯ ಬಿಎ ವಿದ್ಯಾರ್ಥಿನಿ ಪ್ರಿಯಾಂಕಾ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಇಂಚರ ಹಾಗು ತೃತೀಯ ಬಿಎ ವಿದ್ಯಾರ್ಥಿನಿ ಐಶ್ವರ್ಯ ಭಾಗವಹಿಸಿದ್ದರು. ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನೀಡಿರುತ್ತಾರೆ.

ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಬಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಶಾರದಾ, ಸುದೀನ್ ಪೂಜಾರಿ, ಸಂದೇಶ್ ಬಿ ಪೂಂಜ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Related posts

ಗುರುವಾಯನಕೆರೆ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು:ಉಪ್ಪಿನಂಗಡಿ ತಾಲೂಕು ಶ್ರೀ ಪಾಂಡುರಂಗ ಶಾಖೆ ಗುರುವಾಯನಕೆರೆ – ವಾರ್ಷಿಕೋತ್ಸವ ವೈಭವ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya
error: Content is protected !!