September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಕೆ.ಪಿ.ಸಿ.ಸಿ ರಾಜ್ಯ ಕಾರ್ಮಿಕ ಘಟಕದ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆಯಲ್ಲಿ ನಡೆಯಿತು.

ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರ ಆದೇಶದಂತೆ ಹಾಗೂ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ರವರ ಸೂಚನೆಯಂತೆ, ರಾಜ್ಯಾದ್ಯಂತ ಕಾರ್ಮಿಕ ಘಟಕಗಳ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಸಮಿತಿಗಳನ್ನು ರಚಿಸುವ ಮೂಲಕ ಪಕ್ಷ ಸಂಘಟಣೆಗೆ ಹೆಚ್ಚು ಒತ್ತು ನೀಡುವಂತೆ ಸಭೆಯಲ್ಲಿ ಅಭಿಪ್ರಾಯಪಡಲಾಯಿತು ಹಾಗೂ ಮುಂಬರುವ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಪಕ್ಷ ಸಂಘಟನೆಗೆ ಅತೀ ಹೆಚ್ಚು ಶ್ರಮಿಸಿದ ಮತ್ತು ಘಟಕದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕಾರ್ಮಿಕ ಘಟಕದ ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಉಸ್ತುವಾರಿ ಅಬ್ದುಲ್ ರಹಿಮಾನ್ ಪಡ್ಪುರವರನ್ನು ಸಭೆಯಲ್ಲಿ ಗೌರವಿಸಲಾಯಿತು.

ಜಿಲ್ಲಾ ಕಾರ್ಮಿಕ ಘಟಕದಿಂದ ಜಿಲ್ಲಾಮಟ್ಟದ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕ ಘಟಕದ ಕೆಲವು ಬ್ಲಾಕ್ ಅಧ್ಯಕ್ಷರುಗಳಿಗೆ ಆದೇಶ ಪತ್ರ ನೀಡಲಾಯಿತು.

ಸಭೆಯಲ್ಲಿ ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ರತ್ನಾಕರ ಪೂಜಾರಿ,ಉಪಾದ್ಯಕ್ಷ ಸ್ಟೀವನ್ ಡಿ ಸೋಜ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ,ಜಿಲ್ಲಾ ಕಾಂಗ್ರೆಸ್ ನ ಮುಖಂಡರುಗಳು,ಬ್ಲಾಕ್ ಅಧ್ಯಕ್ಷರುಗಳು ಜಿಲ್ಲಾ ತಾಲೂಕು, ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರುಗಳು, ಕಾರ್ಮಿಕ ಘಟಕದ ಪದಾದಿಕಾರಿಗಳು, ಮುಂಚೂಣಿ ಘಟಕಗಳ ಮುಖಂಡರುಗಳು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya
error: Content is protected !!