September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ. ಇತರರಾದ ಪ್ರಿಯಾ, ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಹಾಗೂ ಸಮರ್ಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಸಾಗರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!