September 6, 2026
ಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

ಮಧ್ವ: ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕ, ಮಧ್ವ ಇದರ 15ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಈ ವೈಭವಯುತ ಸಮಾರಂಭದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.
ಸಂಜೆ ಓಂಕಾರ ಭಜನಾ ಮಂಡಳಿಯ ಬಾಲ ಭಜಕರಿಂದ ಭಜನಾ ಸೇವೆ ಭಕ್ತಿಭಾವದಿಂದ ನೆರವೇರಿತು. ಮದ್ವ ಮಂಟಪದಲ್ಲಿ ಕಾಡಬೆಟ್ಟು ನಾರಾಯಣ ಶಿಬರಾಯ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ರಾತ್ರಿ ಓಂಕಾರ ಭಜನಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕಾರಿಂಜ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಬಿ. ಅಮೀನ್ ವಗ್ಗ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ಸಂಘಟನೆಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಓಂಕಾರ ಫ್ರೆಂಡ್ಸ್ ಅಧ್ಯಕ್ಷ ಬಾಲಕೃಷ್ಣ ಗೌಡ ಪಾದೆಬೆಟ್ಟು ಅವರು ಸಭಾಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಭಾಗವಹಿಸಿದ್ದರು.

ವೇದಿಕೆಯಲ್ಲಿ ಬಂಟ್ವಾಳ ನಗರಾಭಿವೃದಿ ಪ್ರಾಧಿಕಾರ ಇದರ ಅಧ್ಯಕ್ಷ ಬೇಬಿ ಕುಂದರ್, ಬಿಜೆಪಿ ಬಂಟ್ವಾಳ ಮಂಡಲ ಇದರ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ , ಬಿಜೆಪಿ ಬಂಟ್ವಾಳ ಮಂಡಲದ ಪ್ರದಾನ ಕಾರ್ಯದರ್ಶಿ ಸುದರ್ಶನ್ ಬಜ, ಯುವವಾಹಿನಿ ಬಂಟ್ವಾಳ ಘಟಕ ಇದರ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೆಲು, ಸುರೇಶ್ ಶೆಟ್ಟಿ ಆರ್ ಕೆ ನಿವಾಸ ಮಧ್ವ, ಧೀರಜ್ ಆಚಾರ್ಯ ಕಲ್ಲಡ್ಕ, ಬಿಜೆಪಿ ಮಹಿಳಾ ಮೋರ್ಚಾ ಬಂಟ್ವಾಳ ಮಂಡಲ ಕಾರ್ಯದರ್ಶಿ ಹರ್ಷಿಣಿ ಪುಷ್ಪನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ರೂಪಕಲ ಮಧ್ವ, ಬಿಜೆಪಿ ಯುವ ಮೋರ್ಚಾ ಬಂಟ್ವಾಳ ಮಂಡಲದ ಅಧ್ಯಕ್ಷ ದಿನೇಶ್ ಶೆಟ್ಟಿ ದಂಬೆದಾರ್, ಚಂದ್ರಶೇಖರ ಶೆಟ್ಟಿ ಪುಳಿಮಜಲು, ಓಂಕಾರ ಮಹಿಳಾ ಘಟಕದ ಅಧ್ಯಕ್ಷೆ ವಿಜಯ ಯೋಗೀಶ್ ಪೂಜಾರಿ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ ಸಾಯಿ ಸುಮಾ ಮಿಥುನ್ ರಾಜ್ ನಾವಡ, ಮೇಜರ್ ಡಾ| ಸುಧಾ ಚಂದ್ರಶೇಖರ್ ಶೆಟ್ಟಿ ಪುಳಿಮಜಲು, ತಿಮ್ಮಪ್ಪ ಮದ್ವ ಹಾಗೂ ಧನ್ಯ ಗೌಡ ಮಧ್ವ ರಾಜಮಾರ್ ಅವರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು.

ಅರ್ಪಣಾ ಸಂತೋಷ್ ಸ್ವಾಗತಿಸಿ, ಪ್ರಮೀತ್ ಪೂಜಾರಿ ವಂದಿಸಿದರು. ರಶ್ಮಿ ಸಂದೇಶ್ ರೈ ಹಾಗೂ ಮೇಘಶ್ರೀ ಯಾದೇಶ್ ರೈ ಕಾರ್ಯಕ್ರಮ ನಿರೂಪಿಸಿದರು. ಪಿಂಗಾರ ಕಲಾವಿದರು ಬೆದ್ರ ಇವರಿಂದ “ಓಂಕಾರ” ಎಂಬ ತುಳು ನಾಟಕ ಪ್ರದರ್ಶನಗೊಂಡಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!