September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

ಗುರುವಾಯನಕೆರೆ: ಭಾರತೀಯ ಪರಂಪರೆ ಕೃಷಿಯ ಜೊತೆಗೆ ನಂಟು ಹೊಂದಿದೆ. ಹೀಗಾಗಿ ಬೇಸಾಯಕ್ಕೆ ಮುನ್ನುಡಿ ಬರೆಯುವ, ವಸಂತ ಋತುವಿನ ಯುಗಾದಿ ನಮಗೆಲ್ಲಾ ಹೊಸ ವರ್ಷವಾಗಿದೆ. ಇಂಥ ಹಬ್ಬಗಳ ಮಹತ್ವವನ್ನು ತಿಳಿಯ ಪಡಿಸುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದುದು ಎಂದು ಬೆಂಗಳೂರಿನ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ಹೇಳಿದರು.

ಅವರು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆದ ಯುಗಾದಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ಮಕ್ಕಳು ನಮ್ಮ ದೇಶದ ಭವಿಷ್ಯ . ಅವರಿಗೆ ನಮ್ಮ ಸಂಸ್ಕೃತಿಯ ಅರಿವಿರಬೇಕು. ದೇಶೀಯ ಹಬ್ಬ ಹರಿದಿನಗಳ ಮಹತ್ವ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಎಲ್ಲಾ ಹಬ್ಬಗಳನ್ನು ನಾವು ಆಚರಿಸುತ್ತೇವೆ ಎಂದರು. .

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಆಡಳಿತಾಧಿಕಾರಿ ಶಾಂತಿರಾಜ್ ಜೈನ್ ಅವರು ಯುಗಾದಿಯ ಸಂದೇಶ ನೀಡಿದರು. ಅತಿಥಿಗಳಾದ ನಾಗರಾಜ್ ಹಾಗೂ ಸುರೇಶ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಪ್ರಸ್ತಾವಿಕ ಮಾತನಾಡಿ,ಸ್ವಾಗತಿಸಿದರು.
ಉಪನ್ಯಾಸಕಿ ಅನನ್ಯ ಜೈನ್ ನಿರೂಪಿಸಿ, ವಂದಿಸಿದರು. ಸಮಾರಂಭದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಯುಗಾದಿ ಸಂಭ್ರಮದ ಸವಿನೆನಪಿಗೆ ಬೇವು ಬೆಲ್ಲ ನೀಡಲಾಯಿತು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!