September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ನಟಿ,ನಿರೂಪಕಿ ಮತ್ತು ಉದ್ಯಮಿ ಸೌಜನ್ಯ ಹೆಗ್ಡೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಮಹಿಳೆಯರು ಕೌಟುಂಬಿಕ ವ್ಯವಸ್ಥೆಯ ಜೀವನವನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಇತ್ತೀಚಿಗಿನ ವರ್ಷಗಳಲ್ಲಿ ಮಹಿಳೆಯರು ಕಚೇರಿ ಹಾಗೂ ಮನೆ ಎರಡನ್ನೂ ಸಮರ್ಥವಾಗಿ ನಿರ್ವಹಿಸಬಲ್ಲರು. ಮಹಿಳಾ ವರ್ಗವು ಎಲ್ಲಾ ಕ್ಷೇತ್ರಗಳಲ್ಲೂ ಸಶಕ್ತಗೊಂಡಾಗ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗುತ್ತದೆ. ಈ ಸಬಲೀಕರಣದ ಜಾಗೃತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ನಿರಂತರವಾಗಿ ಪ್ರಗತಿ ಹಾದಿಯತ್ತ ಸಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪನ್ಯಾಸಕ ಡಾ. ಗಿರೀಶ್ ಕುಮಾರ್ ವಹಿಸಿದ್ದರು.

ಬಳಿಕ ಕಾರ್ಯಕ್ರಮದ ಭಾಗವಾಗಿ, ಮಹಿಳೆಯರ ವೈಯಕ್ತಿಕ ಬೆಳವಣಿಗೆ ಮತ್ತು ಸಬಲೀಕರಣವನ್ನು ಕೇಂದ್ರವಾಗಿರಿಸಿ ಒಂದು ದಿನದ ನಾಯಕತ್ವ ಮತ್ತು ಸಂವಹನಾತ್ಮಕ ಗೋಷ್ಠಿಗಳನ್ನು ಸೌಜನ್ಯ ಹೆಗ್ಡೆ ಹಾಗೂ ಪ್ರೀತಮ್ ಪೊನ್ನಪ್ಪ ರವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಮುಖ್ಯ ಗ್ರಂಥಪಾಲಕಿ ಡಾ. ರಜತಾ ಪಿ. ಶೆಟ್ಟಿ ಸಂಯೋಜಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಅನುಷಾ ಬಿ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ಶುಭಾರಾಣಿ ವಂದಿಸಿದರು.

Related posts

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ವಾಣಿ ಕಾಲೇಜು: ವಿಶ್ವ ಯೋಗ ದಿನಾಚರಣೆ

Suddi Udaya

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

Suddi Udaya
error: Content is protected !!