September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”ಯು ಅತ್ಯಂತ ಯಶಸ್ವಿಯಾಗಿ ಮಾ 25ರಂದು ನಡೆಯಿತು.

ಜಗದ್ಗುರು ಶಂಕರಾಚಾರ್ಯ ವಾಸುದೇವ ಸದಾಶಿವಶ್ರಮ ಮಹಾ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶಾಸಕ ಹರೀಶ್ ಪೂಂಜರವರು ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ” ಯ ಉದ್ಘಾಟನೆ ನೇರವೇರಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್,ಬಳಂಜ‌ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ,ಉದ್ಯಮಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಉಪಸ್ಥಿತರಿದ್ದರು.

ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ ಸ್ವಾಗತಿಸಿದರು, ಚಂದ್ರಶೇಖರ್ ಪಿ‌ಕೆ ಕಾರ್ಯಕ್ರಮ ನಿರೂಪಿಸಿದರು.ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು.

ನೂರಾರು ಭಕ್ತಾದಿಗಳು ಅತ್ಯಂತ ಶ್ರದ್ದಾ ಭಕ್ತಿಯಿಂದ ಕೆರಿಂಜ ಯಾತ್ರೆ ಮಾಡಿ ಭಕ್ತಿ ಭಾವದಿಂದ ಸಂಭ್ರಮಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya
error: Content is protected !!