September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಮಾ.30ರಂದು ಮಹಾವೀರ ಜಯಂತಿ ರಜೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ನಡೆಯಬೇಕಾಗಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮರುದಿನ ಮಾ.31ರಂದು ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು ಮಾ. 18 ರಿಂದ ಎ.2ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಅದರಂತೆ ಈಗಾಗಲೇ ಪರೀಕ್ಷೆ ನಡೆಯುತ್ತಿದೆ. ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾ. ೩೦ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಆಸುಇ 07 ಹೆಚ್‌ಹೆಚ್‌ಎಲ್ 2026 ದಿನಾಂಕ:26-03-2026 ರನ್ನಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31 ಮಂಗಳವಾರ ಬದಲಾಗಿ ಮಾ.30 ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿದೆ.

ಇದರಿಂದಾಗಿ ಮಾ.30ರಂದು ನಿಗಧಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾ. 31ರಂದು ಮಂಗಳವಾರ ಈಗಾಗಲೇ ನಿಗಧಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದು ಎಂದು ಮಂಡಳಿ ನಿರ್ದೇಶ ನೀಡಿದೆ.

Related posts

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya
error: Content is protected !!