24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

ಮಡಂತ್ಯಾರುಪ್ರಾಥಮಿಕ ಕೃಷಿ ಪತ್ತಿನ ಸಹಕರಿ ಸಂಘ ಇದರ ವತಿಯಿಂದ ಮಡಂತ್ಯಾರು ಗ್ರಾಮ ಪಂಚಾಯತ್ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯತ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಾಗಿ ಸೇವೆ ಸಲ್ಲಿಸಿದ ಇವರನ್ನು ಗುರುತಿಸಿ ಗೌರವಿಸಲಾಯಿತು. ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅಭಿವೃದ್ಧಿ ಅಧಿಕಾರಿಗಳನ್ನು ಗೌರವಿಸಲಾಯಿತು.

ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಮಾತನಾಡಿ ಜನರಿಂದ ಚುನಾಯಿತರಾಗಿ ಜನರ ಸೇವೆಯನ್ನು ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾದ ತಮಗೆಲ್ಲರಿಗೂ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕಾಂತಪ್ಪಗೌಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ನಿರ್ದೇಶಕರಾದ ಗಣೇಶ್ ಮೂಲ್ಯ, ಮಹಾಬಲ, ಕಿಶೋರ್ ಕುಮಾರ್, ಸುರೇಶ್ ಎಸ್, ಗೋಪಾಲಕೃಷ್ಣ ಕೆ., ಶ್ರೀಮತಿ ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೊ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

ಸುರೇಶ ಎಸ್ ಕಾರ್ಯಕ್ರಮ ನಿರೂಪಿಸಿದರು.
✍️ ವರದಿ.ಹರ್ಷ ಬಳ್ಳಮಂಜ

Related posts

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!