September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 38 ವರ್ಷ9 ತಿಂಗಳ ಕಾಲ ಸೇವೆ ಸಲ್ಲಿಸಿರುವ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಅವರು ಮಾ.31ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

1987ರಲ್ಲಿ ಬಳಂಜ ಗ್ರಾಮ ಪಂಚಾಯತಿಯ ಗುಮಾಸ್ತನಾಗಿ ಸರಕಾರಿ ಸೇವೆಗೆ ಪಾದಾರ್ಪಣೆ ಮಾಡಿದ ಇವರು 1998ರಲ್ಲಿ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಾಲು ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಭಡ್ತಿಗೊಂಡು ನಂತರ ಮರೋಡಿ, ಬಳಂಜ, ಶಿಶಿಲ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸಿದರು. 2013ರಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ ಹೊಂದಿ ನಾರಾವಿ, ಸರಪಾಡಿ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸಿದರು. 2009ರಿಂದ 2016ರ ತನಕ ಬೆಳ್ತಂಗಡಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕನಾಗಿ ಕರ್ತವ್ಯ ನಿರ್ವಹಿಸಿದರು.

2018ರಿಂದ 2021ರವರೆಗೆ ಬಂಟ್ವಾಳ ತಾಲೂಕು ಪಂಚಾಯತಿಯಲ್ಲಿ ಸಹಾಯಕ ನಿರ್ದೇಶಕ ಮತ್ತು ಸಹಾಯಕ ಲೆಕ್ಕಧಿಕಾರಿಯಾಗಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಿದರು. 2021ರಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಅಧೀಕ್ಷಕರಾಗಿ ಮತ್ತು ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಹಲವಾರು ಲೇಖನಗಳು, ವರದಿಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಇವರು ವಿದ್ಯಾರ್ಥಿ ದಿಸೆಯಲ್ಲೇ ಬಳಂಜ ಗ್ರಾಮದ ಯುವಕ ಮಂಡಲದ ಅಧ್ಯಕ್ಷರಾಗಿ, ಶ್ರೀ ಪಂಚಲಿಂಗೇಶ್ವರ ದೇವಾಲಯದ ಉತ್ಸವ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಎ ಪದವಿ ಪಡೆದ ಇವರು ಬಳೆಂಜ ಗ್ರಾಮದ ದಿ.ಕೆ ಅನಂತರಾಜ ಹೆಗ್ಡೆ, ಶಾರದಮ್ಮ ದಂಪತಿಯ ಸುಪುತ್ರ. ಪತ್ನಿ ಪ್ರಮೀಳ, ಪುತ್ರಿ ಡಾ. ಪ್ರಶಂಸರೊಂದಿಗೆ ಬಳಂಜದಲ್ಲಿ ನೆಲೆಸಿದ್ದಾರೆ.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!