September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

ಉಜಿರೆ: ಸುಶಿಕ್ಷಿತ ಮಹಿಳೆ ಶಕ್ತಿಶಾಲಿ ಸಮಾಜದ ಮೂಲಸ್ತಂಭ ಎಂದು ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ವರ್ಷಾ ಬಾಳಿಗ ಬಣ್ಣಿಸಿದರು.

ಅವರು ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಮಾ.25ರಂದು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

“ಮಹಿಳೆಯರು ಸುಶಿಕ್ಷಿತರಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಆದ ಗುರುತು ಮೂಡಿಸುತ್ತಿದ್ದಾರೆ. ಶಿಕ್ಷಣ, ವಿಜ್ಞಾನ, ಕಲೆ, ಕ್ರೀಡೆ ಸಹಿತ ಎಲ್ಲ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದ್ದು, ಸಮಾಜದ ಬೆಳವಣಿಗೆಗೆ ಕಾರಣೀಭೂತರಾಗುತ್ತಿದ್ದಾರೆ. ಆದುದರಿಂದ ಉತ್ತಮ ವಿದ್ಯಾಭ್ಯಾಸ ಮಾಡಿ ಜೀವನ ರೂಪಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿ” ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., “ನಮ್ಮ ಕಾಲೇಜು ವಿದ್ಯಾರ್ಥಿನಿಯರು ಕೇವಲ ಪಾಠಪುಸ್ತಕಗಳಿಗೆ ಸೀಮಿತವಾಗದೇ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಸ್ಪರ್ಧೆಗಳಲ್ಲೂ ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಈ ಸಾಧನೆಗಳ ಹಿಂದೆ ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲ ಮಹತ್ವದ್ದು” ಎಂದರು.

“ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಫ್ಯಾಶನ್ ಡಿಸೖನ್ ತರಬೇತಿ ಅಥವಾ ಕಂಪ್ಯೂಟರ್ ಶಿಕ್ಷಣವು ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಮತ್ತು ಶೇ.100 ಉದ್ಯೋಗಾವಕಾಶ ಅಥವಾ ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯಕವಾಗುತ್ತದೆ. ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮೂಡಿಸುವ, ಅವರನ್ನು ವಿದ್ಯಾವಂತ ಮತ್ತು ಸ್ವಾವಲಂಬಿ ನಾಗರಿಕರನ್ನಾಗಿ ರೂಪಿಸುವ ಆಶಯ ನಮ್ಮದು. ಇಲ್ಲಿನ ವಿದ್ಯಾರ್ಥಿನಿಯರ ಸಾಧನೆಗಳು ಇತರರಿಗೆ ಪ್ರೇರಣೆಯಾಗಲಿ” ಎಂದು ಆಶಿಸಿದರು. ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ನಿಧಿ ಬಹುಮಾನ ವಿಜೇತರ ಪಟ್ಟಿ ವಾಚಿಸಿ, ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಸುಮಂಗಲಾ ಜೈನ್ ವಂದಿಸಿದರು.

Related posts

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya
error: Content is protected !!