September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ Quest Global ಸಂಸ್ಥೆಯು ಕೊಡಮಾಡುವ ಒಂದು ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡಿದ್ದಾರೆ.

ತೃತೀಯ ವರ್ಷದ ಇಸಿಇ(ECE) ವಿಭಾಗದ ಮೇಘಾ ಪೂಜಾರಿ ಮತ್ತು ದ್ವಿತೀಯ ವರ್ಷದ ಇಸಿಇ (ECE) ವಿಭಾಗದ ಚಿನ್ಮಯಿ ವಿ ತಮ್ಮ 2025-26 ನೇ ಸಾಲಿನ ಶೈಕ್ಷಣಿಕ ಸಾಧನೆ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿನ ಭರವಸೆಯ ಸಾಮರ್ಥ್ಯವನ್ನು ಗುರುತಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಮಾಡಲಾಗಿದೆ. ವಿದ್ಯಾರ್ಥಿಗಳು ತಲಾ 50,000 ದಂತೆ ವೇತನವನ್ನು ಪಡೆಯಲಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ , ವಿಭಾಗದ ಮುಖ್ಯಸ್ಥರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿ ಶುಭ ಹಾರೈಸಿರುತ್ತಾರೆ.

Related posts

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!