September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಶ್ರೀ . ಧ . ಮಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ), ಉಜಿರೆಯಲ್ಲಿ ಬೇಸಿಗೆ ಶಿಬಿರ ಕಾರ್ಯಕ್ರಮವು ಮಾ.24ರಂದು ಉದ್ಘಾಟನೆಗೊಂಡಿತು. ಈ ಶಿಬಿರದ ಉದ್ಘಾಟನೆಯನ್ನು ಉಜಿರೆಯ ಡೈನಾಮಿಕ್ ಡ್ಯಾನ್ಸ್ ಫ್ಯಾಕ್ಟರಿಯ ಸಂಯೋಜಕ ವಿನ್ಯಾಸ್ ಭಂಡಾರಿ ನೆರವೇರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಸಮಗ್ರ ಅಭಿವೃದ್ಧಿಗೆ ಇಂತಹ ಬೇಸಿಗೆ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಕೌಶಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಮೂರು ದಿನಗಳ ಈ ಶಿಬಿರದಲ್ಲಿ ವಿವಿಧ ರೀತಿಯ ಕ್ರಿಯಾತ್ಮಕ ಚಟುವಟಿಕೆಗಳು, ಕ್ರೀಡೆಗಳು, ನೃತ್ಯ, ಕಲೆ ಹಾಗೂ ವ್ಯಕ್ತಿತ್ವ ಅಭಿವೃದ್ಧಿ ತರಬೇತಿಗಳು ಒಳಗೊಂಡಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುವಂತಾಗುತ್ತದೆ.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಬಿರವು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅನುಭವ ಮತ್ತು ಜ್ಞಾನವನ್ನು ನೀಡಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಯಿತು.

Related posts

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
error: Content is protected !!