September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ ಆಂಡ್ ಕಮ್ಯುನಿಕೇಶನ್ ವಿಭಾಗಕ್ಕೆ ಪ್ರತಿಷ್ಠಿತ ನ್ಯಾಷನಲ್ ಬೋರ್ಡ್ ಆಫ್ ಅಕ್ರೀಡಿಯೇಷನ್ (ಎನ್.ಬಿ.ಎ) ಸಂಸ್ಥೆಯಯಿಂದ ಮಾನ್ಯತೆ ಲಭಿಸಿದೆ. ಶೈಕ್ಷಣಿಕ ಗುಣಮಟ್ಟದ ಆಧಾರದ ಮೇಲೆ ನೀಡುವ ಈ ರಾಷ್ಟ್ರೀಯ ಮಟ್ಟದ ಮಾನ್ಯತೆಯು 2026 ಜನವರಿಯಿಂದ 2028 ಡಿಸೆಂಬರ್ ಮೂರು ವರ್ಷದವರೆಗೆ ಮಾನ್ಯವಾಗಿರುತ್ತದೆ.

ಕಳೆದ ಡಿಸೆಂಬರ್ 2025 ರಂದು ಎನ್.ಬಿ.ಎಂ ಸಂಸ್ಥೆಯ ತಜ್ಜರ ತಂಡವು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಶೈಕ್ಷಣಿಕ ಕಲಿಕಾ – ಬೋಧನೆಯ ಗುಣಮಟ್ಟ, ಪ್ರಯೋಗಾಲಯದ ಸೌಲಭ್ಯ, ಫಲಿತಾಂಶ, ವಿದ್ಯಾರ್ಥಿಗಳ ಸಾಧನೆ, ನಿರಂತರ ಚಟುವಟಿಕೆ ಇತ್ಯಾದಿ ವ್ಯವಸ್ಥೆಗಳನ್ನು ಮೂರುದಿನಗಳ ಕಾಲ ಸಮಗ್ರವಾಗಿ ಮಾನದಂಡಗಳಿಗೆ ಅನುಗುಣವಾಗಿ ಪರಿಶೀಲನೆ ನಡೆಸಿ ಈ ರಾಷ್ಟ್ರೀಯ ಮಟ್ಟದ ಮಾನ್ಯತೆಯನ್ನು ಶಿಫಾರಸ್ಸು ಮಾಡಿರುತ್ತದೆ.

ಈ ಮಾನ್ಯತೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿ ಸಮೂಹ ಮತ್ತು ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಅಭಿನಂದನೆಗಳನ್ನು ತಿಳಿಸಿರುತ್ತಾರೆ. ಸಂಸ್ಥೆಯ ಕಾರ್ಯದರ್ಶಿಗಳಾದ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಶೈಕ್ಷಣಿಕ ಸಾಧನೆಯನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ವಿಭಾಗಳು ರಾಷ್ಟ್ರೀಯ ಮಟ್ಟದ ಮಾನ್ಯತೆಯನ್ನು ಪಡೆಯುವ ವಿಶ್ವಾಸ ವ್ಯಕ್ತಪಡಿಸಿದರು.

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಮಾತನಾಡಿ, ಇದು ಸಂಸ್ಥೆಗೆ ಅತ್ಯಂತ ಹೆಮ್ಮೆಯ ಕ್ಷಣ. ಎಸ್.ಡಿ.ಎಂ ಆಡಳಿತ ಮಂಡಳಿಯ ಮಾರ್ಗದರ್ಶನ, ವಿದ್ಯಾರ್ಥಿಗಳು ಮತ್ತು ಬೋಧಕ ನಿರಂತರ ಪರಿಶ್ರಮದಿಂದಾಗಿ ಈ ಯಶಸ್ಸು ಲಭಿಸಲು ಸಾಧ್ಯವಾಗಿದೆ ಎಂದರು.

ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯವು ಶೈಕ್ಷಣಿಕ ಗುಣಮಟ್ಟದ ಜೊತೆಗೆ ಆಧುನಿಕ ಪ್ರಯೋಗಾಲಯಗಳನ್ನು ಹೊಂದಿದೆ. ಅನೇಕ ಕೈಗಾರಿಕಾ ಉದ್ಯಮಗಳೊಂದಿಗೆ ಸಹಭಾಗಿತ್ವವನ್ನು ಹೊಂದಿದ್ದು, ಇಂಟ್ರೆಂಷಿಪ್, ಕ್ಯಾಂಪಸ್ ನೇಮಕಾತಿ, ನುರಿತ ತಜ್ಞರಿಂದ ತರಬೇತಿ ಇತ್ಯಾದಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಆದ್ಯತೆ ನೀಡುತ್ತಾ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅನುವು ಮಾಡಿ ಕೊಡುತ್ತಿದೆ. ಕಳೆದ 18 ವರ್ಷಗಳಿಂದ ಸಂಸ್ಥೆಯೂ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ನೀಡುವ ಸಂಸ್ಥೆಗಳಲೊಂದಾಗಿದ್ದು, ಇದೀಗ ಸಂಸ್ಥೆಗೆ ಮತ್ತಷ್ಟು ಬಲ ತುಂಬಿದಂತಾಗಿದೆ.
– ಡಾ. ಅಶೋಕ್ ಕುಮಾರ್ ಪ್ರಾಂಶುಪಾಲರು, ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಉಜಿರೆ

Related posts

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya
error: Content is protected !!