September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವನು ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಕಾರಣ ಬಯಲಾಗಬೇಕಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
error: Content is protected !!