September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜ್ ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗದ ಡಿವೈಡರ್ ಗೆ ಮಾ.28 ರಂದು ರಾತ್ರಿ ಸುಮಾರು 12:30 ಗಂಟೆಗೆ ಕಾರ್ಯಕ್ರಮ ಮುಗಿಸಿ ವಾಪಸ್ ಬರುತ್ತಿದ್ದಾಗ ಕೆ.ಟಿ.ಎಮ್ ಕಂಪನಿಯ ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಪುತ್ರ ನಿತೇಶ್(19) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪುತ್ತೂರು ನಿವಾಸಿ ಲಿಖಿತ್(20) ನಿವಾಸಿ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರು ಕೂಡ ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಾಗಿದ್ದಾರೆ.ಉಜಿರೆ ಕಾಲೇಜ್ ರಸ್ತೆಯಲ್ಲಿ ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ತಕ್ವ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ನಡ : ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ ಆಯ್ಕೆ

Suddi Udaya
error: Content is protected !!