September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

ನಿಡ್ಲೆ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆಯವರು ಶಾಲೆಗೆ ನೀಡಿದ ಎರಡು ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಸರಕಾರಿ ಪ್ರೌಢಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮಾ.29ರಂದು ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ನಡೆಯಿತು.

ಪಿಪಿಎಲ್ ಸಂಸ್ಥೆ ವತಿಯಿಂದ ನಿರ್ಮಿಸಿದ ಶಾಲಾ ಕೊಠಡಿಯನ್ನು ಪಿಪಿಎಲ್ ಮುಖ್ಯ ಉತ್ಪದನಾ ಅಧಿಕಾರಿ ಎಸ್. ಗಿರೀಶ್‌ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಆರ್‌ಎಸ್‌ಪಿ ಘಟಕದ ನಿವೃತ್ತ ಜನರಲ್ ಮ್ಯಾನೇಜರ್ ಹಾಗೂ ಹಳೆ ವಿದ್ಯಾರ್ಥಿ ಉಮೇಶ ರಾವ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಪಿಪಿಎಲ್ ಮುಖ್ಯ ಉತ್ಪದನಾ ಅಧಿಕಾರಿ ಎಸ್. ಗಿರೀಶ್‌ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್‌ ಟ್ರಸ್ಟ್‌ನ ಹೆಚ್‌ಒಡಿ ಹೃಷಿಕೇಶ್‌ ಅಮೀನ್, ಉಜಿರೆ ಬೆನಕ ಹೆಲ್ತ್‌ ಸೆಂಟರ್‌ನ ಆಡಳಿತ ನಿರ್ದೇಶಕ ಹಾಗೂ ಹಳೆ ವಿದ್ಯಾರ್ಥಿ ಡಾ| ಗೋಪಾಲಕೃಷ್ಣ ಕೆ., ಸ್ವಾಮಿ ಪ್ರಸಾದ್‌ ಕನ್ಸ್ಟ್ರಕ್ಷನ್‌ನ ಗಿರೀಶ್‌ ಕುಮಾರ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್‌ ಎಲ್‌., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ, ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್‌ ಅಧ್ಯಕ್ಷ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್, ನಿವೃತ್ತ ಮುಖ್ಯ ಶಿಕ್ಷಕಿ ಶಾಂತ ಶೆಟ್ಟಿ ಉಪಸ್ಥಿತರಿದ್ದರು.

ಈ ವೇಳೆ ಪಿಪಿಎಲ್ ಮುಖ್ಯ ಉತ್ಪದನಾ ಅಧಿಕಾರಿ ಎಸ್. ಗಿರೀಶ್‌ , ಚಾರಿಟೇಬಲ್‌ ಆಸ್ಪತ್ರೆಯ ಜಂಟಿ ಪ್ರಧಾನ ವ್ಯವಸ್ಥಾಪಕ ಡಾ| ಯೋಗೀಶ್‌, ಪಿಪಿಎಲ್‌ ನ ಸಹಾಯಕ ವ್ಯವಸ್ಥಾಪಕ, ಹಳೆ ವಿದ್ಯಾರ್ಥಿ ರಾಕೇಶ್‌ ಎಂ. ಇವರನ್ನು ಸನ್ಮಾನಿಸಲಾಯಿತು.

ಡಾ| ಗೋಪಾಲಕೃಷ್ಣ ಕೆ. ರವರು ಶಾಲಾ ಕೊಠಡಿ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಪಿಪಿಎಲ್‌ ಸಂಸ್ಥೆಯ ವಿವೇಕ್‌ ಕೋಟ್ಯಾನ್, ಸುಭಾಷ್, ರವೀಂದ್ರ, ಆದಿತ್ಯ, ಜಗದೀಶ್‌, ಅಶೋಕ್‌ ಪ್ರಭು, ಮನೋಜ್‌ ಪಾಟೀಲ್, ಹಳೆ ವಿದ್ಯಾರ್ಥಿ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಕೃಷ್ಣಪ್ರಸಾದ್, ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದ, ಶಾಲಾ ಮಕ್ಕಳು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಭಾರ ಮುಖ್ಯಶಿಕ್ಷಕ ಶರತ್ ಕುಮಾರ್‌ ಎಂ. ಸ್ವಾಗತಿಸಿದರು. ಶಿಕ್ಷಕಿ ಶೋಲಿ ವಿ.ಜೆ. ನಿರೂಪಿಸಿದರು. ರಾಜಗುರು ಹೆಬ್ಬಾರ್ ವಂದಿಸಿದರು.

ಈ ಸಂದರ್ಭದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ರಾಸಾಯನಿಕ ಉತ್ಪನ್ನಗಳ ಪ್ರಾತಿಕ್ಷಿಕೆ ಜರುಗಿತು.

Related posts

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!