September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಅತಿಥಿಗಳಾಗಿ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮನೋವೈದ್ಯೆ ಡಾ| ಸ್ವಾತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿ ಮಕ್ಕಳು ಬೇಸಿಗೆ ಶಿಬಿರದಲ್ಲಿ ತರಬೇತಿ ಪಡೆದು ತಮ್ಮ ಕೈಯಾರೆ ತಾವೇ ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು.

ಬಳಿಕ ವಿವಿಧ ಮಳಿಗೆಗಳಾದ ಆಹಾರ ಉತ್ಪನ್ನ ಮಳಿಗೆ, ಪರಿಸರ ಸ್ನೇಹಿ ಉತ್ಪನ್ನಗಳ ಮಳಿಗೆ, ಆಭರಣದ ಮಳಿಗೆ, ಕರಕುಶಲ ಮಳಿಗೆ, ಕಲಾತ್ಮಕ ವಸ್ತುಗಳ ಮಳಿಗೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಮಾತುಗಳನ್ನಾಡಿದರು.

ಈ ಕಾರ್ಯಕ್ರಮದಲ್ಲಿ ಶೆರ್ಲಿ ನರ್ಸಿಂಗ್ ಸೂಪರ್ ಇಂಟೆಂಡೆಂಟ್, ಚಿದಾನಂದ ಪಿ ಆರ್ ಓ ಎಸ್ ಡಿ ಎ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ .ವಿ. ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ . ಕಾರ್ಯಕ್ರಮ ನಿರ್ವಹಿಸಿದರು.ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
error: Content is protected !!