29.8 C
ಪುತ್ತೂರು, ಬೆಳ್ತಂಗಡಿ
October 21, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಏ. 3 ರಿಂದ 6: ವಿದ್ವತ್ ಕಾಲೇಜಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ–2026: 30 ಪ್ರಶ್ನೆಗಳು 30 ನಿಮಿಷ, ವಿಜೇತರಿಗೆ ಲ್ಯಾಪ್ಟಾಪ್-ಟ್ಯಾಬ್ ಬಹುಮಾನ

ಬೆಳ್ತಂಗಡಿ: 10ನೇ ತರಗತಿಯ ಬಳಿಕ ಮುಂದೇನು? ಎಂದು ವಿದ್ಯಾರ್ಥಿಗಳಲ್ಲಿ ಕಾಡುವ ಪ್ರಶ್ನೆಗೆ ಉತ್ತರ ಒದಗಿಸುವ ಸಲುವಾಗಿ, ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಇದೇ ಏ. 3 ರಿಂದ 6 ವರೆಗೆ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ತಮ್ಮ ಅನುಕೂಲಕರ ದಿನಗಳಲ್ಲಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ನಾಲ್ಕು ದಿನಗಳ ಕಾಲ ಪರೀಕ್ಷೆಯನ್ನು ಆಯೋಜಿಸಲಾಗಿದೆ.

ಪರೀಕ್ಷೆಗೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಪ್ರತಿದಿನ ಬೆಳಗ್ಗೆ 10.30 ರಿಂದ 11 ಗಂಟೆವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.00 ರವರೆಗೆ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಕ್ಯಾಂಪಸ್‌ನಲ್ಲಿ ಪರೀಕ್ಷೆ ಆಯೋಜಿಸಲಿದೆ.

ಈ ಪರೀಕ್ಷೆಯಲ್ಲಿ ವಿಜ್ಞಾನ (Science) ವಿಭಾಗದಿಂದ 10 ಹಾಗೂ ಗಣಿತ (Mathematics) ವಿಭಾಗದಿಂದ 20 ಪ್ರಶ್ನೆಗಳಿರಲಿವೆ. ಪರೀಕ್ಷೆ ಅವಧಿ 30 ನಿಮಿಷಗಳಾಗಿದ್ದು ಈ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ.

ಅತೀ ಹೆಚ್ಚು ಅಂಕ ಗಳಿಸಿದರೆ ಲ್ಯಾಪ್ಟಾಪ್:
ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನವಾಗಿ ಲ್ಯಾಪ್ಟಾಪ್ ನೀಡಲಾಗುವುದು. ಗಮನಾರ್ಹ ಸಾಧನೆ ಮಾಡಿದ ವಿಜೇತರಿಗೆ ಟ್ಯಾಬ್‌ಗಳು ಬಹುಮಾನವಾಗಿ ನೀಡಲಾಗುತ್ತದೆ. ಕಾಲೇಜಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪರೀಕ್ಷೆಯಲ್ಲಿ ಪಡೆಯುವ ಅಂಕದ ಮೇರೆಗೆ ವಿಶೇಷ ವಿದ್ಯಾರ್ಥಿ ವೇತನದ ಅವಕಾಶವನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯುವಂತೆ ತಿಳಿಸಲಾಗಿದೆ. ನೋಂದಣಿಗಾಗಿ ಇಂದೇ 7618775600 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಗುರುವಾಯನಕರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮಶ್ರದ್ಧೆಯಿಂದ ಕಲಿತರೆ ಅದ್ಭುತ ಅವಕಾಶ: ಖ್ಯಾತ ನಿರ್ದೇಶಕ ಸ್ಮಿತೇಶ್ ಬಾರ್ಯ ವಿದ್ಯಾರ್ಥಿಗಳ ಕನಸು ನನಸು ಮಾಡುವುದೇ ನಮ್ಮ ಗುರಿ: ಸುಮಂತ್ ಕುಮಾರ್ ಜೈನ್

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya
error: Content is protected !!