September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಅರೋಗ್ಯ ಜಾಗೃತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಮತ್ತು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಎಚ್ ಐ ವಿ, ವಿಷಪೂರಿತ ಹಾವು ಮತ್ತು ಹುಚ್ಚು ನಾಯಿ ಕಡಿತ, ಮಾನಸಿಕ ಖಿನ್ನತೆಗಳ ಬಗ್ಗೆ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಶ್ರೀ ಧರ್ಮ ಪಾಲ್ ಎಮ್. ಎಚ್ ಐ ವಿ ರೋಗದ ಗುಣಲ ಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಬೆಳ್ತಂಗಡಿಯ ತಾಲೂಕು ಆರೋಗ್ಯ ಕಚೇರಿಯ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಇವರು ವಿಷಪೂರಿತ ಹಾವು ಕಚ್ಚಿದರೆ ಮಾಡಬೇಕಾದ ಪ್ರಥಮ ಚಿಕಿತ್ಸೆ ಮತ್ತು ಹುಚ್ಚು ನಾಯಿ ಕಡಿದರೆ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಬೆಳ್ತಂಗಡಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ RKSK ಆಪ್ತ ಸಮಾಲೋಚಕರಾದ ಡಾ . ಹಸ್ತ ವಿದ್ಯಾರ್ಥಿಗಳಿಗೆ ಕಾಡುವ ಮಾನಸಿಕ ಖಿನ್ನತೆಯನ್ನು ತಡೆಗಟ್ಟಲು ಆಹಾರ ಮತ್ತು ವ್ಯಾಯಾಮ, ಯೋಗ ಸೇರಿದಂತೆ ಆರೋಗ್ಯಕರ ಜೀವನಶೈಲಿಯ ಆಯ್ಕೆಗಳ ಬಗ್ಗೆ ತಿಳಿಸಿ ಕೊಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿ, ಮಾನ್ಯ ಡಿ ಪಿ ವಂದಿಸಿದರು.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಹಾರ ಮೇಳ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!