September 6, 2026
ತಾಲೂಕು ಸುದ್ದಿ

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೆಶಕರಾದ ಪದ್ಮಲತಾ ನಿರಂಜನ್ ಕುಮಾರ್ ದಂಪತಿಗಳು ಮಾ.30ರಂದು ಬೆಳ್ತಂಗಡಿಯಲ್ಲಿರುವ ಸಿರಿ ಕೇಂದ್ರ ಕಛೇರಿಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಿರಿ ಸಂಸ್ಥೆಯಲ್ಲಿ ನಡೆಯುತ್ತಿರುವ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತದನಂತರ ಸಿರಿ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿ, ಸುಮಾರು 22 ವರ್ಷಗಳ ಹಿಂದೆ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಪ್ರಾರಂಭಿಸಿದ ‘ಸಿರಿ’ ಎಂಬ ಕನಸಿನ ಕೂಸು ಇಂದು ಬೆಳೆದು ಹೆಮ್ಮರವಾಗಿ ನಿಂತಿದೆ. ಪ್ರಾರಂಭದಲ್ಲಿ ಹಳ್ಳಿ ಹಳ್ಳಿಗಳಲ್ಲಿರುವ ಬಡ ಗ್ರಾಮೀಣ ಮಹಿಳೆಯರಿಗೆ ತಮ್ಮ ತಮ್ಮ ಮನೆಗಳಲ್ಲಿಯೇ ಸಿರಿ ಉತ್ಪನ್ನಗಳನ್ನು ಉತ್ಪಾದಿಸುವ ಕುರಿತು ತರಬೇತಿಯನ್ನು ನೀಡಿ, ಅವರಿಂದ ಉತ್ಪಾದಿಸಲಾಗುವ ಸಿರಿ ಉತ್ಪನ್ನಗಳನ್ನು ಎಲ್ಲೆಡೆ ಮಾರಾಟ ಮಾಡಿ ಬಂದಂತಹ ಮೊತ್ತದಿಂದ ಬಡ ಹೆಣ್ಣುಮಕ್ಕಳ ಜೀವನಕ್ಕೆ ಆರ್ಥಿಕವಾಗಿ ದಾರಿ ತೋರುತ್ತಿದ್ದ ಸಿರಿ ಸಂಸ್ಥೆ ಹಂತ ಹಂತವಾಗಿ ಬೆಳೆದು ಇಂದು ಸಾವಿರಾರು ಹೆಣ್ಣುಮಕ್ಕಳ ಬಾಳು ಬೆಳಗುವಲ್ಲಿ ಯಶಸ್ವಿಯಾಗಿದೆ.

ಅಂದಿನಿಂದ ಇಂದಿನವರೆಗೂ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರ ಈ ಅವಿರತ ಶ್ರಮ, ಪ್ರಾಮಾಣಿಕ ಪ್ರಯತ್ನಗಳ ಹಿಂದೆ ಇರುವ ಧೃಡಸಂಕಲ್ಪ ಒಂದೇ. ಅದೇ ‘ಸ್ತ್ರೀ ಸಬಲೀಕರಣ’. ಸಿರಿ ಸಂಸ್ಥೆ ಸೇರಿದಂತೆ ಇಂದು ರಾಜ್ಯದ ಹಲವೆಡೆ ಕಾರ್ಯಾಚರಿಸುತ್ತಿರುವ ಎಸ್.ಡಿ.ಎಂನ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಲ್ಲಿ ಶೇ.70 ರಷ್ಟು ಮಹಿಳೆಯರೇ ಉದ್ಯೋಗ ನಿರ್ವಹಿಸುತ್ತಿರುವುದು ಬಹಳ ಹೆಮ್ಮೆಯ ವಿಚಾರ. ಸಿರಿಯಲ್ಲಿ ದುಡಿಯುವ ಎಲ್ಲಾ ಹೆಣ್ಣುಮಕ್ಕಳು ಪ್ರಾಮಾಣಿಕವಾಗಿ, ಸಂತೃಪ್ತಿಯಿಂದ ದುಡಿದು ಪೂಜ್ಯ ದಂಪತಿಗಳ ಸ್ತ್ರೀ ಸಬಲೀಕರಣದ ಕನಸನ್ನು ಸಾಕಾರಗೊಳಿಸುವ ಮೂಲಕ ಸಿರಿ ಸಂಸ್ಥೆಯ ಉತ್ಪನ್ನಗಳು ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆಯನ್ನು ಪಡೆಯಲಿ. ಇದರಿಂದ ಇನ್ನಷ್ಟು ಹೆಣ್ಣುಮಕ್ಕಳಿಗೆ ಉದ್ಯೋಗ ಲಭಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನರವರು ಪ್ರಸ್ತಾವಿಕವಾಗಿ ಮಾತನಾಡಿ, ಧಾರವಾಡದಲ್ಲಿ ಕಾರ್ಯಾಚರಿಸುತ್ತಿರುವ ಎಸ್.ಡಿ.ಎಂ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಲ್ಲಿ ಸಿರಿಯ ಉತ್ಪನ್ನಗಳನ್ನೇ ಬಳಸಿ, ಇಲ್ಲಿ ದುಡಿಯುತ್ತಿರುವ ಸಾವಿರಾರು ಸಿಬ್ಬಂದಿಗಳಿಗೂ ಕೂಡಾ ಸಿರಿ ಉತ್ಪನ್ನಗಳನ್ನು ಬಳಸುವಂತೆ ಪ್ರೇರೇಪಿಸುವ ಮೂಲಕ ಸಿರಿಯ ಸಮಸ್ತ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಡಾ.ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ವಿಭಾಗಗಳ ಮೇಲ್ವಿಚಾರಕರು, ಸಿಬ್ಬಂದಿವರ್ಗದವರು ಡಾ.ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಭ್ರಮಿಸಿದರು. ಸಿರಿ ಆಹಾರ ಗೋದಾಮು ಜನರಲ್ ಮ್ಯಾನೇಜರ್ ಶ್ರೀ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿರ್ಲಾಲು: ಭೀಕರ ಮಳೆಗೆ ರಸ್ತೆ ಸಂಪರ್ಕ ಕಡಿದು ಹೋಗುವ ಭೀತಿ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya
error: Content is protected !!